ಉದಯವಾಹಿನಿ,ನವದೆಹಲಿ: ವಿರಳ ಲೋಹಗಳನ್ನು (ರೇರ್ ಅರ್ಥ್ ಮ್ಯಾಗ್ನೆಟ್‌ಗಳ) ದೇಶದಲ್ಲಿಯೇ ಉತ್ಪಾದಿಸುವುದನ್ನು ಉತ್ತೇಜಿಸುವುದಕ್ಕಾಗಿ ಸಹಾಯಧನ ನೀಡುವ ₹1,345 ಕೋಟಿ ವೆಚ್ಚದ ಯೋಜನೆಯನ್ನು ರೂಪಿಸಲಾಗುತ್ತಿದೆ. ಇದಕ್ಕಾಗಿ ವಿವಿಧ ಸಚಿವಾಲಯಗಳ ನಡುವೆ ಸಮಾಲೋಚನೆಗಳು ನಡೆದಿವೆ ಎಂದು ಕೇಂದ್ರ ಬೃಹತ್ ಕೈಗಾರಿಕೆಗಳ ಸಚಿವ ಎಚ್.ಡಿ.ಕುಮಾರಸ್ವಾಮಿ ಶುಕ್ರವಾರ ಹೇಳಿದ್ದಾರೆ.
ಅದಿರಿನ ಗಣಿಗಾರಿಕೆ, ಸಂಸ್ಕರಣೆಯಿಂದ ಹಿಡಿದು ಪೂರ್ಣಪ್ರಮಾಣದ ವಿರಳ ಲೋಹ ಸಿದ್ಧಗೊಳ್ಳುವವರೆಗೆವರೆಗಿನ ಕಾರ್ಯಕ್ಕೆ ಈ ಯೋಜನೆಯಡಿ ನೆರವು ನೀಡಲಾಗುತ್ತದೆ. ವಿರಳ ಲೋಹಗಳ ರತ್ತಿನ ಮೇಲೆ ಚೀನಾ ಈಚೆಗೆ ನಿರ್ಬಂಧ ವಿಧಿಸಿರುವ ಕಾರಣದಿಂದಾಗಿ ವಾಹನ ಮತ್ತು ಸೆಮಿಕಂಡಕ್ಟರ್ ಚಿಪ್‌ಗಳ ತಯಾರಿಕೆಯ ಮೇಲೆ ಕೆಟ್ಟ ಪರಿಣಾಮ ಉಂಟಾಗಿದೆ. ಈ ಕಾರಣಕ್ಕೆ ಈ ಯೋಜನೆ ಜಾರಿಗೆ ತರಲು ಕೇಂದ್ರ ಸರ್ಕಾರ ಉದ್ದೇಶಿಸಿದೆ. ‘ಇಬ್ಬರು ಉತ್ಪಾದಕರನ್ನು ಈ ಪ್ರಸ್ತಾವ ಒಳಗೊಂಡಿದೆ. ವಿವಿಧ ಸಚಿವಾಲಯಗಳ ನಡುವಿನ ಸಮಾಲೋಚನೆಗಳು ಪೂರ್ಣಗೊಂಡ ಬಳಿಕ, ಪ್ರಸ್ತಾವವನ್ನು ಅನುಮೋದನೆಗಾಗಿ ಕೇಂದ್ರ ಸಚಿವ ಸಂಪುಟಕ್ಕೆ ಕಳುಹಿಸಲಾಗುವುದು’ ಎಂದು ಎಚ್.ಡಿ.ಕುಮಾರಸ್ವಾಮಿ ಇಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
‘ಅದಿರುಗಳನ್ನು ಸಂಸ್ಕರಿಸಿ ವಿರಳ ಲೋಹಗಳನ್ನಾಗಿ ಪರಿವರ್ತಿಸುವ ಸಾಮರ್ಥ್ಯ ಹೊಂದಿರುವ ಎರಡು ಕಂಪನಿಗಳಿಗೆ ಈ ಯೋಜನೆಯ ವಿವರಗಳನ್ನು ಕಳುಹಿಸಲಾಗಿದೆ’ ಎಂದು ಸುದ್ದಿಗೋಷ್ಠಿಯಲ್ಲಿ ಇದ್ದ ಬೃಹತ್ ಕೈಗಾರಿಕೆಗಳ ಸಚಿವಾಲಯ ಕಾರ್ಯದರ್ಶಿ ಕಮ್ರಾನ್ ರಿಜ್ಜಿ ಹೇಳಿದರು.

Leave a Reply

Your email address will not be published. Required fields are marked *

error: Content is protected !!