ಉದಯವಾಹಿನಿ, ಸಿಧಿ: ಮಧ್ಯಪ್ರದೇಶದ ಸಿಧಿ ಜಿಲ್ಲೆಯ ತಮ್ಮ ಊರಿಗೆ ವಾಹನ ಸಂಚಾರಕ್ಕೆ ಅನುಕೂಲಕರವಾದ ರಸ್ತೆ ನಿರ್ಮಿಸುವಂತೆ ಗರ್ಭಿಣಿ ಮಹಿಳೆಯೊಬ್ಬರು ಬೇಡಿಕೆ ಇಟ್ಟಿದ್ದರು.
ಈ ಕುರಿತು ಬಿಜೆಪಿ ಸಂಸದ ರಾಜೇಶ್ ಮಿಶ್ರಾ ಪ್ರತಿಕ್ರಿಯೆ ನೀಡಿದ್ದಾರೆ.
ರಸ್ತೆ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ 25 ವರ್ಷದ ಲೀಲಾ ಸಾಹು, ‘ನಾನು ಮಗುವಿಗೆ ಜನ್ಮ ನೀಡಿದ ಬಳಿಕ ನವದೆಹಲಿಗೆ ತೆರಳಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗುತ್ತೇನೆ.
ಆದಷ್ಟು ಬೇಗ ರಸ್ತೆ ನಿರ್ಮಿಸುವಂತೆ ಮನವಿ ಮಾಡುತ್ತೇನೆ” ಎಂದು ಹೇಳಿದ್ದಾರೆ.
‘ಒಂದು ವರ್ಷದ ಹಿಂದೆ ಸಾಮಾಜಿಕ ಮಾಧ್ಯಮದಲ್ಲಿ ರಸ್ತೆ ವಿಚಾರವಾಗಿ ಅಭಿಯಾನ ಆರಂಭಿಸಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಟ್ಯಾಗ್ ಮಾಡಿ ಮನವಿ ಮಾಡಿದ್ದೆ. ಇದರ ಬೆನ್ನಲ್ಲೇ ಕಳೆದ ವರ್ಷ ಮಳೆಗಾಲದ ನಂತರ ರಸ್ತೆ ನಿರ್ಮಿಸಲಾಗುವುದು ಎಂದು ಸಿಧಿ ಸಂಸದ ರಾಜೇಶ್ ಮಿಶ್ರಾ ಭರವಸೆ ನೀಡಿದ್ದರು. ಆದರೆ, ಇದುವರೆಗೆ ರಸ್ತೆ ನಿರ್ಮಿಸಿಲ್ಲ’ ಎಂದು ಸಾಹು ಆರೋಪಿಸಿದ್ದಾರೆ.
ಸಾಹು ಅವರು ಕಳೆದೊಂದು ವರ್ಷದಿಂದ ಜಿಲ್ಲಾ ಕೇಂದ್ರದಿಂದ ಸುಮಾರು 40 ಕಿ.ಮೀ.
ದೂರದಲ್ಲಿರುವ ಕಡ್ಡಿ-ಬಗ್ಗೆಹಾ ಗ್ರಾಮಕ್ಕೆ ಸರಿಯಾದ ಸಂಪರ್ಕ ರಸ್ತೆ ಇಲ್ಲದಿರುವುದನ್ನು ಬಿಂಬಿಸುವ ರೀಲ್ಸ್ಗಳನ್ನು ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು. ಇದೀಗ ಮತ್ತೆ ರಸ್ತೆ ವಿಚಾರವಾಗಿಯೇ ಅವರು ಸುದ್ದಿಯಲ್ಲಿದ್ದಾರೆ. ನಮ್ಮ ಊರಿನಲ್ಲಿ ನಾನು ಸೇರಿದಂತೆ ಇತರ ಐವರು ಗರ್ಭಿಣಿಯರಿದ್ದು, ಆಸ್ಪತ್ರೆಗೆ ಹೋಗುವುದಕ್ಕೆ ಕಷ್ಟವಾಗುತ್ತಿದೆ.
ಹಾಗಾಗಿ ಕೂಡಲೇ ರಸ್ತೆ ನಿರ್ಮಿಸುವಂತೆ ಮತ್ತೊಮ್ಮೆ ಮನವಿ ಮಾಡಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿದ ಮಿಶ್ರಾ, ‘ಮಧ್ಯಪ್ರದೇಶದಲ್ಲಿ ಮೋಹನ್ ಯಾದವ್‌ ನೇತೃತ್ವದ ಸರ್ಕಾರ ಆಡಳಿತ ನಡೆಸುತ್ತಿದೆ. ನಮ್ಮಲ್ಲಿ ಸಾಕಷ್ಟು ಆಂಬುಲೆನ್ಸ್‌ ಗಳಿವೆ. ಯಾರು ಕೂಡಾ ಚಿಂತಿಸಬೇಕಿಲ್ಲ. ಲೀಲಾ ಅವರ ಹೆರಿಗೆಯ ನಿಗದಿತ ದಿನಾಂಕವನ್ನು ತಿಳಿಸಿದರೆ, ನಾವು ಆಕೆಯನ್ನು ಒಂದು ವಾರ ಮೊದಲೇ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತೇವೆ.

Leave a Reply

Your email address will not be published. Required fields are marked *

error: Content is protected !!