ಉದಯವಾಹಿನಿ, ಮೈಸೂರು: ಹಿರಿಯ ಪತ್ರಕರ್ತರಾದ ಕೆ.ಬಿ ಗಣಪತಿ ಅವರಿಂದು ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ.‌ 88 ವರ್ಷದ ಕೆ.ಬಿ. ಗಣಪತಿ ಅವರು ತಮ್ಮ ಬದುಕಿನ ಕಡೆಯ ದಿನದವರೆಗೂ ಪತ್ರಿಕಾಲಯದಲ್ಲಿ ಸಕ್ರಿಯರಾಗಿದ್ದರು. ಕೆಬಿ ಗಣಪತಿ ಅವರು ತಮ್ಮ ಒಡೆತನದ ಕನ್ನಡದ ʻಮೈಸೂರು ಮಿತ್ರʼ ಹಾಗೂ ಇಂಗ್ಲೀಷ್‌ನ ಸ್ಟಾರ್ ಆಫ್ ಮೈಸೂರು (Star of Mysore) ಪತ್ರಿಕೆಗಳ ಮೂಲಕ ಹಳೇ ಮೈಸೂರು ಪ್ರಾಂತ್ಯದಲ್ಲಿ ದೊಡ್ಡ ಓದುಗ ವರ್ಗವನ್ನು ಸೃಷ್ಟಿಸುವಲ್ಲಿ ಯಶಸ್ವಿಯಾದವರು. ಇದರ ಜೊತೆಗೆ ನೂರಾರು ಪತ್ರಕರ್ತರನ್ನ ಈ ನಾಡಿಗೆ ಕೊಡುಗೆ ನೀಡಿದ ಹಿರಿಮೆ ಗಣಪತಿ ಅವರಿಗೆ ಸಲ್ಲುತ್ತದೆ.

ಅಂಕಣ ಬರಹಗಳ ಮೂಲಕ ಪತ್ರಕರ್ತರ ಸಾಮಾಜಿಕ ಬದ್ಧತೆಯನ್ನ ಸಮಾಜಕ್ಕೆ ತೋರಿಸಿದವರು ಗಣಪತಿ. ಯಶಸ್ವಿ ಪತ್ರಿಕೋದ್ಯಮದ ಮೂಲಕ ಇಡೀ ರಾಜ್ಯದ ಪತ್ರಿಕ ಸಮೂಹ ಮೈಸೂರಿನ ಕಡೆ ನೋಡುವ ಹಾಗೆ ಮಾಡುವಲ್ಲಿ ಯಶಸ್ವಿಯಾಗಿದ್ದರು. ಸುಮಾರು 50 ವರ್ಷಗಳ ನಿರಂತರ ಪತ್ರಿಕೋದ್ಯಮದಲ್ಲಿ ಮೈಲಿಗಲ್ಲಿನಂತಹ ನೂರಾರು ಸಾಧನೆಗಳನ್ನು ಗಣಪತಿ ಅವರು ಮಾಡಿದ್ದಾರೆ. ಅವರನ್ನು ಕಳೆದುಕೊಳ್ಳುವ ಮೂಲಕ ಪತ್ರಿಕೋದ್ಯಮ ಶೂನ್ಯ ಸೃಷ್ಟಿಸಿಕೊಂಡಿದೆ.

Leave a Reply

Your email address will not be published. Required fields are marked *

error: Content is protected !!