
ಉದಯವಾಹಿನಿ, ರಾಮನಗರ: ಚಾಲಕನ ನಿಯಂತ್ರಣ ತಪ್ಪಿದ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ತಂದೆ-ಮಗ ಸೇರಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್‌ವೇನ ಜಯಪುರ ಗೇಟ್ ಬಳಿ ಇಂದು ಬೆಳಗ್ಗೆ ನಡೆದಿದೆ.ಚಿಕ್ಕನಾಯಕನಹಳ್ಳಿಯ ತಮಣ್ಣ ಗೌಡ (56) ಪುತ್ರ ಮುತ್ತುರಾಜ್ (28) ಹಾಗೂ ಹಾಸನ ಮೂಲದ ಚಾಲಕ ಸಚಿನ್ (27) ಮೃತಪಟ್ಟ ದುರ್ದೈವಿಗಳು.ಬೆಂಗಳೂರಿನಲ್ಲಿ ವಾಸವಾಗಿದ್ದ ಇವರು ಮಡುವಿನಕುಡಿ ಗ್ರಾಮದಲ್ಲಿ ಕಾರ್ಯಕ್ರಮಕ್ಕೆ ತೆರಳಿ ಇಂದು ಬೆಳಗ್ಗೆ ಮೈಸೂರಿನಿಂದ ಬೆಂಗಳೂರಿಗೆ ಸ್ವಿಫ್‌್ಟ ಕಾರಿನಲ್ಲಿ ವಾಪಸ್ಸಾಗುತ್ತಿದ್ದಾಗ ಜಯಪುರ ಗೇಟ್ ಬಳಿ ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆಬದಿಯ ತಡೆಗೊಡೆಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡು ಚಿಕಿತ್ಸೆಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಾಲಕ ನಿದ್ದೆ ಮಂಪರಿನಲ್ಲಿ ವಾಹನ ಚಾಲನೆ ಮಾಡಿರುವುದು ಅಪಘಾತಕ್ಕೆ ಕಾರಣ ಎನ್ನಲಾಗಿದೆ.
