ಉದಯವಾಹಿನಿ, ಬೆಂಗಳೂರು: ದಕ್ಷಿಣ ಭಾರತದ ಖ್ಯಾತ ನಟ ಕೋಟ ಶ್ರೀನಿವಾಸ ರಾವ್ (83) ಅವರು ಇಂದು ನಿಧನರಾಗಿದಾರೆ.ಕಳೆದ ಕೆಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಹೈದರಾಬಾದ್‌ನಲ್ಲಿವ ಅವರ ನಿವಾಸದಲ್ಲಿ ಮುಂಜಾನೆ ವಿಧಿವಶರಾಗಿದ್ದಾರೆ. 80 ವರ್ಷ ದಾಟಿದ ಮೇಲೆ ವೃದ್ಧಾಪ್ಯಸಮಸ್ಯೆ ಶುರುವಾಗಿದ್ದು ಸಿನಿಮಾ ನಟನೆ ಕಡಿಮೆಯಾಗಿತ್ತು ಅವರ ಕೊನೆಯ ಚಿತ್ರ 2023ರಲ್ಲಿ ಬಿಡುಗಡೆಯಾದ ಸುವರ್ಣ ಸುಂದರಿ ಸಾಕಷ್ಟು ಮೆಚ್ಚುಗೆ ಪಡೆದಿತ್ತು. ಶ್ರೀನಿವಾಸ ರಾವ್ ಅವರು 1942ರ ಜುಲೈ 10ರಂದು ಕೃಷ್ಣ ಜಿಲ್ಲೆಯ ಕಂಕಿಪಡುವಿನಲ್ಲಿ ಜನಿಸಿದರು. ಅವರ ತಂದೆ ಡಾ. ಸೀತಾರಾಮಾಂಜನೇಯುಲು. ಬಾಲ್ಯದಲ್ಲಿ ತಂದೆಯಂತೆ ವೈದ್ಯನಾಗಬೇಕೆಂದು ಬಯಸಿದ್ದರೂ, ಶಾಲಾ ದಿನಗಳಲ್ಲಿ ನಾಟಕಗಳಲ್ಲಿ ಕಾಣಿಸಿಕೊಂಡ ನಂತರ ನಟನೆಯಲ್ಲಿ ಆಸಕ್ತಿ ಬೆಳೆಸಿಕೊಂಡು ನಟನೆಯನ್ನು ತಮ್ಮ ವೃತ್ತಿಯನ್ನಾಗಿ ಮಾಡಿಕೊಂಡರು.
1978ರಲ್ಲಿ ಪ್ರಣಾಮ್ ಖರೀದು ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು.ಅನೇಕ ಬಗೆಯ ಪಾತ್ರಗಳನ್ನು ನಿರ್ವಹಿಸಿ ಸೈ ಎನಿಸಿಕೊಂಡಿದ್ದರು.ತೆಲುಗು ಮಾತ್ರವಲ್ಲದೇ ತಮಿಳು, ಹಿಂದಿ, ಕನ್ನಡ ಮತ್ತು ಮಲಯಾಳಂ ಸಿನಿಮಾಗಳಲ್ಲಿ ಕೂಡ ಕೋಟ ಶ್ರೀನಿವಾಸ ರಾವ್ ಅವರು ನಟಿಸಿದ್ದರು.
