ಉದಯವಾಹಿನಿ, ಚೆನ್ನೈ: ಡೀಸೆಲ್ ಸಾಗಿಸುತ್ತಿದ್ದ ಸರಕು ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ತಿರುವಲ್ಲೂರು ರೈಲು ನಿಲ್ದಾಣದ ಬಳಿ ನಡೆದಿದೆ. ಮನಾಲಿಯಿಂದ (Manali) ತಿರುಪತಿಗೆ ಹೋಗುತ್ತಿದ್ದ ರೈಲಿಗೆ ತಿರುವಲ್ಲೂರು ರೈಲು ನಿಲ್ದಾಣದ ಬಳಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಮತ್ತು ರಕ್ಷಣಾ ತಂಡಗಳು ಸ್ಥಳೀಯರನ್ನು ರೈಲು ನಿಲ್ದಾಣದ ಪ್ರದೇಶಗಳಿಂದ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದವು. ಬಳಿಕ ಸಾಕಷ್ಟು ಪ್ರಯತ್ನ ನಡೆಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದವು. ಬೆಂಕಿಯಿಂದ ಸುಮಾರು 22 ಬೋಗಿಗಳಿಗೆ ಹಾನಿಯಾಗಿದೆ.
ಮನಾಲಿಯಿಂದ ತಿರುಪತಿಗೆ ಭಾನುವಾರ ಬೆಳಗ್ಗೆ 5.30ರ ಸುಮಾರಿಗೆ ಸಾಗುತ್ತಿದ್ದ ಸರಕು ರೈಲಿಗೆ ತಿರುವಲ್ಲೂರು ರೈಲು ನಿಲ್ದಾಣದ ಬಳಿ ಬೆಂಕಿ ಹತ್ತಿಕೊಂಡಿದೆ. ಕೂಡಲೇ ನಿಲ್ದಾಣದಲ್ಲಿದ್ದ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಯಿತು. ಅಗ್ನಿಶಾಮಕ ಮತ್ತು ರಕ್ಷಣಾ ತಂಡಗಳು ನಿರಂತರ ತೀವ್ರ ಪ್ರಯತ್ನ ನಡೆಸಿ ಬೆಂಕಿಯನ್ನು ನಂದಿಸಿದರು.
ಸರಕು ರೈಲಿನ 5 ಬೋಗಿಗಳಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅದು 22 ಬೋಗಿಗಳಿಗೆ ಆವರಿಸಿದೆ. ಇದರಿಂದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆತಂಕದ ವಾತಾವರಣ ಉಂಟಾಗಿತ್ತು. ರೈಲಿನಲ್ಲಿ ಡೀಸೆಲ್ ಇದ್ದುದರಿಂದ ಬೆಂಕಿಯನ್ನು ನಂದಿಸುವುದು ಸವಾಲಿನ ಕಾರ್ಯವಾಗಿತ್ತು. ನಿರಂತರ ಪ್ರಯತ್ನ ನಡೆಸಿದ ಅಗ್ನಿಶಾಮಕ ಮತ್ತು ರಕ್ಷಣಾ ತಂಡಗಳು ಸಾಕಷ್ಟು ಸಮಯದ ಬಳಿಕ ಬೆಂಕಿಯನ್ನು ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾದವು. ರೈಲಿಗೆ ಬೆಂಕಿ ಹೊತ್ತಿಕೊಂಡಿದ್ದರಿಂದ ಯಾವುದೇ ಹಾನಿಯಾಗಿಲ್ಲ ಎಂದು ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.
