ಉದಯವಾಹಿನಿ, ಮುಂಬೈ: ಮಹಾರಾಷ್ಟ್ರದ ಪಾಲ್ಘರ್‌ನಲ್ಲಿ ಆಟೋ ಚಾಲಕನೊಬ್ಬ ಮರಾಠಿ ಮಾತನಾಡಲು ನಿರಾಕರಿಸಿದ್ದಕ್ಕಾಗಿ ರಾಜ್ ಠಾಕ್ರೆ ಅವರ ಎಂಎನ್‌ಎಸ್ ಬೆಂಬಲಿಗರು ಆಟೋ ಚಾಲಕನಿಗೆ ಸಾರ್ವಜನಿಕವಾಗಿ ಥಳಿಸಿದ್ದಾರೆ. ಸದ್ಯ ಆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆಟೋರಿಕ್ಷಾ ಚಾಲಕನೊಬ್ಬ ಉತ್ತರ ಪ್ರದೇಶದ ಭವೇಶ್ ಪಡೋಲಿಯಾ ಜೊತೆ ವಿರಾರ್ ನಿಲ್ದಾಣದಲ್ಲಿ ವಾಗ್ವಾದ ನಡೆಸುತ್ತಿರುವುದನ್ನು ತೋರಿಸುವ ವಿಡಿಯೋ ವೈರಲ್ ಆಗಿದೆ. ಮರಾಠಿಯಲ್ಲಿ ಏಕೆ ಮಾತನಾಡುತ್ತಿಲ್ಲ ಎಂದು ಕೇಳಿದಾಗ ಹಿಂದಿಯಲ್ಲಿ ಮಾತ್ರ ಮಾತನಾಡುತ್ತೇನೆ ಎಂದು ಆತ ವಿಡಿಯೋದಲ್ಲಿ ಹೇಳಿದ್ದಾನೆ.
ಪಡೋಲಿಯಾ ಚಾಲಕನನ್ನು ಸಾರ್ವಜನಿಕವಾಗಿ ಮರಾಠಿ ಏಕೆ ಮಾತನಾಡುವುದಿಲ್ಲ ಎಂದು ಕೇಳಿದ್ದರು, ಅದಕ್ಕೆ ಅವರ ಚಾಲಕ ತಾನು ಹಾಗೆ ಮಾಡುವುದಿಲ್ಲ. ತಾನು ಹಿಂದಿ ಹಾಗೂ ಭೋಜಪುರಿ ಮಾತ್ರ ಮಾತನಾಡುತ್ತೇನೆ ಎಂದು ಆತ ಹೇಳಿದ್ದಾನೆ. ಈ ಘಟನೆಯ ಹಿನ್ನೆಲೆಯಲ್ಲಿ, ಶಿವಸೇನಾ ಯುಬಿಟಿ ಮತ್ತು ಎಂಎನ್‌ಎಸ್ ಬೆಂಬಲಿಗರು ರೈಲ್ವೆ ನಿಲ್ದಾಣದ ಬಳಿ ಆಟೋರಿಕ್ಷಾ ಚಾಲಕನ ವಿರುದ್ಧ ವಾಗ್ದಾಳಿ ನಡೆಸಿದರು.
