ಉದಯವಾಹಿನಿ, ಕಲಬುರಗಿ: ಪ್ರಿಯಾಂಕ್ ಖರ್ಗೆ ಆಪ್ತ ಕಲಬುರಗಿ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲಿಂಗರಾಜ್ ಕಣ್ಣಿಯನ್ನು ಮಹಾರಾಷ್ಟ್ರ ಪೊಲೀಸರು ಬಂಧಿಸಿದ್ದಾರೆ. ಇದರ ಬೆನ್ನಲ್ಲೇ ಪಕ್ಷದಿಂದ ಅವರನ್ನು ಉಚ್ಛಾಟನೆ ಮಾಡಲಾಗಿದೆ.ಮಾದಕ ದ್ರವ್ಯ ಮಾರಾಟ ಆರೋಪದ ಮೇಲೆ ಲಿಂಗರಾಜ್‍ರನ್ನು ಪೊಲೀಸರು ಬಂಧಿಸಿದ್ದರು. ಇದರ ಬೆನ್ನಲ್ಲೇ, ತಕ್ಷಣದಿಂದ ಜಾರಿಗೆ ಬರುವಂತೆ ಕಲಬುರಗಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಗದೇವ ಗುತ್ತೆದಾರ ಅವರು ಉಚ್ಛಾಟನೆ ಮಾಡಿ ಆದೇಶ ಹೊಡಿಸಿದ್ದಾರೆ.
ಮಹಾರಾಷ್ಟ್ರದ ಥಾಣೆ ನಗರದಲ್ಲಿ ಮಾದಕದ್ರವ್ಯ ಮಾರಾಟ ಮಾಡುವ ಬಂಧನ ಮಾಡಲಾಗಿದೆ. ಬಂಧನ ಮಾಡುವಾಗ ನಿಷೇಧಿತ 120 ಕೊಡೆನೈನ್ ಸಿರಪ್ ಹೊಂದಿದ್ದ ಆರೋಪ ಕೇಳಿ ಬಂದಿದೆ.ಮಾದಕ ವಸ್ತುಗಳು ಹಾಗೂ ಅಮಲು ಪದಾರ್ಥಗಳ ನಿಯಂತ್ರಣ ಕಾಯ್ದೆ (NDPS) ಅಡಿ ಕಲ್ಯಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
