ಉದಯವಾಹಿನಿ,ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿರ್ಭುಮ್ ಜಿಲ್ಲೆಯಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕನ ಮೇಲೆ ಗುಂಡು ಹಾರಿಸಿ ಕೊಲೆ ಮಾಡಲಾಗಿದೆ.ಜಿಲ್ಲೆಯ ಕೊಮಾರ್‌ಪುರ ಗ್ರಾಮದಲ್ಲಿ ಶ್ರೀನಿಧಿಪುರ ಪಂಚಾಯತ್ ಅಧ್ಯಕ್ಷ ಪಿಯೂಷ್ ಘೋಷ್ ಮೇಲೆ ಬಂದೂಕುಧಾರಿಗಳು ಗುಂಡು ಹಾರಿಸಿ ಕೊಲೆ ಮಾಡಲಾಗಿತ್ತು. ವ್ಯಾಪಾರ ಕಲಹದಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ಶಂಕಿಸಿದ್ದಾರೆ.ವಿವಾದಗಳ ಬಗ್ಗೆ ನಾವು ತನಿಖೆ ನಡೆಸುತ್ತಿದ್ದೇವೆ ಎಂದು ಅವರು ಹೇಳಿದರು.ಕಳೆದ ಕೆಲವು ದಿನಗಳಲ್ಲಿ ಇದು ಟಿಎಂಸಿ ನಾಯಕರ ಮೂರನೇ ಕೊಲೆಯಾಗಿದೆ. ದಕ್ಷಿಣ 24 ಪರಗಣ ಜಿಲ್ಲೆಯ ಭಾಂಗರ್‌ನ ಟಿಎಂಸಿ ಸ್ಥಳೀಯ ಸಮಿತಿ ಅಧ್ಯಕ್ಷ ರಜ್ಜಕ್ ಖಾನ್ ಅವರನ್ನು ಗುರುವಾರ ಕೊಲ್ಲಲಾಯಿತು, ಆದರೆ ಟಿಎಂಸಿ ಪಂಚಾಯತ್ ಮಟ್ಟದ ಕಾರ್ಯಕರ್ತ ಅಬುಲ್ ಕಲಾಂ ಆಜಾದ್ ಅವರನ್ನು ಜುಲೈ 10 ರಂದು ಮಾಲ್ಡಾದ ಇಂಗ್ಲಿಷ್ ಬಜಾರ್‌ನಲ್ಲಿ ತಮ್ಮ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದಾಗ ಕೊಚ್ಚಿ ಕೊಲ್ಲಲಾಗಿತ್ತು. ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಪೊಲೀಸರು ಕೊಲೆಗೆ ಸಂಬಂಧಿಸಿದಂತೆ ಇಬ್ಬರು ಮಹಿಳೆಯರು ಸೇರಿದಂತೆ ಮೂವರನ್ನು ಬಂಧಿಸಿದ್ದಾರೆ ಎಂದು ಗೊತ್ತಾಗಿದೆ.
