ಉದಯವಾಹಿನಿ, ಕೇರಳ: ನಿಫಾ ಆತಂಕದ ಹಿನ್ನೆಲೆಯಲ್ಲಿ ಕೇರಳದ ಆರು ಜಿಲ್ಲೆಗಳಲ್ಲಿ ಎಚ್ಚರಿಕೆ ನೀಡಲಾಗಿದೆ. ಪಾಲಕ್ಕಾಡ್ ಜಿಲ್ಲೆಯಲ್ಲಿ ಶನಿವಾರ ವ್ಯಕಿಯೊಬ್ಬರು ಸಾವನ್ನಪ್ಪಿದ್ದು, ನಿಫಾ ವೈರಸ್ ಸೋಂಕು ತಗಲಿರುವ ಶಂಕೆ ವ್ಯಕ್ತವಾಗಿದೆ. ಈ ಮೂಲಕ ಕೇರಳದಲ್ಲಿ ಶಂಕಿತ ನಿಫಾ ಸೋಂಕಿಗೆ ಎರಡನೇ ವ್ಯಕ್ತಿ ಬಲಿಯಾದಂತಾಗಿದೆ. ಈ ಹಿಂದೆ ಮಲಪ್ಪುರಂ ಮೂಲದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದರು. ಈ ಹಿನ್ನೆಲೆಯಲ್ಲಿ ಭಾನುವಾರ ರಾಜ್ಯ ಸರ್ಕಾರವು ಆರು ಜಿಲ್ಲೆಗಳಲ್ಲಿ ಎಚ್ಚರಿಕೆ ಆದೇಶವನ್ನು ಹೊರಡಿಸಿದೆ. ಸೋಂಕಿತರ ಸಂಪರ್ಕ ಜಾಲವನ್ನು ಪತ್ತೆ ಹಚ್ಚಲು ಕ್ರಮ ಕೈಗೊಳ್ಳಲಾಗಿದೆ.
ಪಾಲಕ್ಕಾಡ್ ಜಿಲ್ಲೆಯ 57 ವರ್ಷದ ವ್ಯಕ್ತಿಯೊಬ್ಬರು ಜುಲೈ 12ರಂದು ನಿಧನರಾಗಿದ್ದಾರೆ. ಇವರಿಗೆ ನಿಫಾ ಸೋಂಕು ತಗಲಿರುವ ಶಂಕೆ ವ್ಯಕ್ತವಾಗಿದೆ. ಇದಕ್ಕೂ ಮುನ್ನ ಮಲಪ್ಪುರಂ ಮೂಲದ ವ್ಯಕ್ತಿಯೊಬ್ಬರು ನಿಫಾ ಸೋಂಕಿನಿಂದ ಸಾವನ್ನಪ್ಪಿದ್ದರು.ಈ ಕುರಿತು ಮಾತನಾಡಿರುವ ರಾಜ್ಯ ಆರೋಗ್ಯ ಸಚಿವೆ ವೀಣಾ ಜಾರ್ಜ್, ಪಾಲಕ್ಕಾಡ್, ಮಲಪ್ಪುರಂ, ಕೋಝಿಕ್ಕೋಡ್, ಕಣ್ಣೂರು, ವಯನಾಡ್ ಮತ್ತು ತ್ರಿಶೂರ್ ಜಿಲ್ಲೆಗಳ ಆಸ್ಪತ್ರೆಗಳಿಗೆ ನಿಫಾ ವೈರಸ್ ಲಕ್ಷಣಗಳನ್ನು ಹೊಂದಿರುವವರ ಬಗ್ಗೆ ವರದಿ ಮಾಡಲು ಆದೇಶಿಸಲಾಗಿದೆ. ನಿಫಾ ಸೋಂಕಿನ ಲಕ್ಷಣಗಳನ್ನು ಪತ್ತೆಹಚ್ಚಲು ಆರೋಗ್ಯ ತಂಡಗಳು ಈ ಪ್ರದೇಶದಲ್ಲಿ ಕಣ್ಗಾವಲು ನಡೆಸುತ್ತಿವೆ ಎಂದು ತಿಳಿದರು.
ನಿಫಾ ವೈರಸ್ ಸೋಂಕಿತರನ್ನು ಪತ್ತೆ ಹಚ್ಚಲು ಕ್ಷೇತ್ರ ತಂಡಗಳನ್ನುರಚಿಸಲಾಗಿದೆ. ಪರಿಸ್ಥಿತಿಯ ಮೇಲ್ವಿಚಾರಣೆ ನಡೆಸಲು ಲಭ್ಯವಿರುವ ಎಲ್ಲಾ ಡೇಟಾವನ್ನು ಬಳಸಲಾಗುತ್ತಿದೆ. ಪಾಲಕ್ಕಾಡ್‌ನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದ 57 ವರ್ಷದ ವ್ಯಕ್ತಿಯ ಪ್ರಕರಣದಲ್ಲಿ ಸಂಪರ್ಕ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ ಎಂದು ಅವರು ಹೇಳಿದರು.ಪಾಲಕ್ಕಾಡ್ ವ್ಯಕ್ತಿಯಲ್ಲಿ ನಿಫಾ ಸೋಂಕಿನ ಲಕ್ಷಣಗಳಿದ್ದು, ರಾಜ್ಯ ಸರ್ಕಾರವು ಪುಣೆಯ ರಾಷ್ಟ್ರೀಯ ವೈರಾಲಜಿ ಸಂಸ್ಥೆಯಿಂದ (NIV) ದೃಢೀಕರಣಕ್ಕಾಗಿ ಕಾಯುತ್ತಿದೆ ಎಂದು ತಿಳಿಸಿದರು.ಮಂಜೇರಿ ವೈದ್ಯಕೀಯ ಕಾಲೇಜಿನಲ್ಲಿ ಆ ವ್ಯಕ್ತಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ರೋಗಿಯ ಸಂಪರ್ಕಕ್ಕೆ ಬಂದ 46 ಜನರ ಪಟ್ಟಿಯನ್ನು ಸಂಗ್ರಹಿಸಲಾಗಿದೆ. ಸಂಪರ್ಕ ಪಟ್ಟಿಯಲ್ಲಿರುವವರನ್ನು ಗುರುತಿಸಲು ಸಿಸಿಟಿವಿ ದೃಶ್ಯಾವಳಿಗಳು ಮತ್ತು ಮೊಬೈಲ್ ಟವರ್ ಸ್ಥಳ ಡೇಟಾವನ್ನು ಬಳಸಲಾಗಿದೆ ಎಂದು ಹೇಳಿದರು.

Leave a Reply

Your email address will not be published. Required fields are marked *

error: Content is protected !!