ಉದಯವಾಹಿನಿ, ತುಮಕೂರು: ಜೂಜು ಅಡ್ಡೆ ಬಗ್ಗೆ ಮೇಲಧಿಕಾರಿಗೆ ಮಾಹಿತಿ ನೀಡಿದ್ದಕ್ಕೆ ತಿಪಟೂರು ತಾಲೂಕಿನ ಹೊನ್ನವಳ್ಳಿ ಠಾಣೆಯ ಪೊಲೀಸರು ವಿಶೇಷ ಚೇತನ ವ್ಯಕ್ತಿಯ ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಚೌಲಿಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ​ಚೌಲಿಹಳ್ಳಿ ಗ್ರಾಮದಲ್ಲಿ ನಡೆಯುತ್ತಿದ್ದ ಅಕ್ರಮ ಜೂಜಾಟದ ಬಗ್ಗೆ ರಘು ಅವರು ತಿಪಟೂರು ಸರ್ಕಲ್​ ಇನ್ಸ್​ಪೆಕ್ಟರ್​ಗೆ ಮಾಹಿತಿ ನೀಡಿದ್ದರು. ಈ ಕಾರಣದಿಂದ ಹೊನ್ನವಳ್ಳಿ ಠಾಣೆ ಎಸ್​ಐ ರಾಜೇಶ್​, ಸಿಬ್ಬಂದಿ ಯೋಗೀಶ್ ವಿಶೇಷ ಚೇತನರಾದ ರಘು ಅವರ ಮನೆಗೆ ನುಗ್ಗಿ ಬೂಟ್​​ ಕಾಲಿನಿಂದ ಒದ್ದು, ನಿಂದಿಸಿ ಹಲ್ಲೆ ಮಾಡಿದ್ದಾರೆ.
ಈ ವೇಳೆ ತಡೆಯಲು ಬಂದ ಕುಟುಂಬದ ಮಹಿಳೆಯರ ಮೇಲೂ ಹಲ್ಲೆ ಮಾಡಿದ್ದಾರೆ ಎಂದು ರಘು ತಾಯಿ ತುಮಕೂರು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಕೆ.ವಿ.ಅಶೋಕ್​ ಅವರಿಗೆ ದೂರು ನೀಡಿದ್ದಾರೆ. ಎಸ್​ಐ ರಾಜೇಶ್​, ಸಿಬ್ಬಂದಿ ಯೋಗೀಶ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ಪೊಲೀಸರ ಹಲ್ಲೆಯಿಂದ ರಘು ಬಲಗಾಲು‌ ಮುರಿದಿದ್ದು, ತಿಪಟೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!