ಉದಯವಾಹಿನಿ,ಬೆಂಗಳೂರು: ಜೂನ್.30ರಂದು ನಡೆಯಲಿರುವಂತ ಮೂರು ವಿಧಾನಪರಿಷತ್ತಿನ ಸ್ಥಾನಗಳ ಉಪ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಮೂವರು ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಈ ಕುರಿತಂತೆ ಎಐಸಿಸಿಯಿಂದ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ವಿಧಾನ ಪರಿಷತ್ತಿನ ಮೂರು ಸ್ಥಾನಗಳಿಗೆ ನಡೆಯಲಿರುವಂತ ಉಪ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳನ್ನಾಗಿ ಮಾಜಿ ಸಿಎಂ ಜಗದೀಶ್ ಶೆಟ್ಟರ್, ತಿಪ್ಪಣ್ಣಪ್ಪ ಕಮಕನೂರ್ ಹಾಗೂ ಎನ್ ಎಸ್ ಬೋಸೆರಾಜು ಅವರ ಹೆಸರನ್ನು ಘೋಷಿಸಿದೆ. ನಾಳೆ ವಿಧಾನ ಪರಿಷತ್ ಉಪ ಚುನಾವಣೆಗೆ ಕೊನೆಯ ದಿನವಾದ ಕಾರಣ ಕಾಂಗ್ರೆಸ್ ಪಕ್ಷದಿಂದ ಈ ಮೂವರು ಅಭ್ಯರ್ಥಿಗಳು ನಾಮಪತ್ರವನ್ನು ಸಲ್ಲಿಸಿದ್ದಾರೆ.
ಅಂದಹಾಗೇ ಕೇಂದ್ರ ಚುನಾವಣಾ ಆಯೋಗದಿಂದ ವಿಧಾನಸಭಾ ಮೂರು ಸ್ಥಾನಗಳಿಗೆ ಉಪಚುನಾವಣೆ ಸಂಬಂಧ ಅಧಿಸೂಚನೆಯನ್ನು ಹೊರಡಿಸಿತ್ತು. ಶಾಸಕ ಲಕ್ಷ್ಮಣ್ ಸವದಿ ಅವರ ವಿಧಾನ ಪರಿಷತ್ ಸದಸ್ಯ ಸ್ಥಾನದ ಅವಧಿ ಜೂನ್.14ಕ್ಕೆ, ಬಾಬು ರಾವ್ ಚಿಂಚನಸೂರ್ ಜೂನ್,17ರಂದು ಹಾಗೂ ಆರ್ ಶಂಕರ್ ಅವರ ಅಧಿಕಾರಾವಧಿ ಜೂನ್.30ರಂದು ಕೊನೆಗೊಳ್ಳಲಿದೆ ಎಂದಿತ್ತು. ಮೂವರು ಕರ್ನಾಟಕ ವಿಧಾನ ಪರಿಷತ್ ಸದಸ್ಯರ ಅಧಿಕಾರಾವಧಿ ಕೊನೆಗೊಳ್ಳುತ್ತಿರುವ ಹಿನ್ನಲೆಯಲ್ಲಿ ಈ ಮೂರು ಸ್ಥಾನಗಳಿಗೆ ಜೂನ್.30ರಂದು ಉಪ ಚುನಾವಣೆ ನಡೆಸುವುದಾಗಿ ತಿಳಿಸಿತ್ತು.
