ಉದಯವಾಹಿನಿ, ಚಿಕ್ಕಬಳ್ಳಾಪುರ: ಹೆಡ್ ಕಾನ್ಸ್‌ಟೇಬಲ್ ಒಬ್ಬರು ಪೊಲೀಸ್ ಠಾಣೆ ಆವರಣದಲ್ಲೇ ಇರುವ ಕ್ವಾಟ್ರಸ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಮಂಚೇನಹಳ್ಳಿ ಪೊಲೀಸ್ ಠಾಣೆಯ ಹೆಡ್ ಕಾನ್ಸ್‌ಟೇಬಲ್ ರಾಜಶೇಖರ್ (45) ಆತ್ಯಹತ್ಯೆ ಮಾಡಿಕೊಂಡವರು. ಠಾಣಾ ಆವರಣದಲ್ಲಿದ್ದ ಕ್ವಾಟ್ರಸ್‌ನಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಚಿಕ್ಕಬಳ್ಳಾಪುರ ಎಸ್ಪಿ ಕುಶಲ್ ಚೌಕ್ಸೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಕಾರಣ ಏನು..?: ಮೊಬೈಲ್ ಆನ್‌ಲೈನ್ ಜೂಜಾಟಗಳಿಗೆ ದಾಸನಾಗಿದ್ದ ಕಾನ್ಸ್‌ಟೇಬಲ್ ಲಕ್ಷಾಂತರ ರೂಪಾಯಿ ಸಾಲ ಮಾಡಿಕೊಂಡಿದ್ದರು. ಹಲವರ ಬಳಿ ಬಡ್ಡಿಗೆ ಕೈಸಾಲ ಮಾಡಿಕೊಂಡಿದ್ದರು. ಈ ಬಗ್ಗೆ ತನ್ನ ಪೋಷಕರ ಬಳಿ ಕಷ್ಟ ಹೇಳಿಕೊಂಡಿದ್ದರು. ಜೊತೆಗೆ ಪತ್ನಿಯ ಚಿನ್ನಾಭರಣವನ್ನ ಸಾಲ ತೀರಿಸಲು ಅಡವಿಟ್ಟಿದ್ದರು ಎಂದು ಕುಟುಂಬದ ಮೂಲಗಳಿಂದ ತಿಳಿದುಬಂದಿದೆ.
