ಉದಯವಾಹಿನಿ, ತಿರುವನಂತಪುರಂ: ಮೂರು ವರ್ಷದ ಹಿಂದೆ ಕಾಗೆ ಹೊತ್ತೊಯ್ದಿದ್ದ ಚಿನ್ನದ ಬಳೆ ಮರಳಿ ಒಡತಿಯ ಕೈ ಸೇರಿದ ಘಟನೆ ಕೇರಳದ ಮಲಪ್ಪುರಂನ ತ್ರಿಕ್ಕಲಂಗೋಡ್‌ನಲ್ಲಿ ನಡೆದಿದೆ. ಮೂರು ವರ್ಷದ ಹಿಂದೆ ರುಕ್ಮಿಣಿ ಕೆಲಸ ಮಾಡುವ ವೇಳೆ ಒಂದೂವರೆ ಪವನ್ ತೂಕವಿದ್ದ (12 ಗ್ರಾಂ) ಚಿನ್ನದ ಬಳೆಯನ್ನು ಕೈಯಿಂದ ತೆಗೆದಿಟ್ಟಿದ್ದರು. ಕ್ಷಣಾರ್ಧದಲ್ಲಿ ಕಾಗೆಯೊಂದು ಅವರ ಬಳೆಯನ್ನು ಎಗರಿಸಿತ್ತು. ಬಳೆಗಾಗಿ ಸ್ವಲ್ಪ ದಿನ ಹುಡುಕಾಡಿದ ರುಕ್ಮಿಣಿ ಕುಟುಂಬಸ್ಥರು ಬಳಿಕ ಅದರ ಆಸೆ ಕೈಬಿಟ್ಟಿದ್ದರು. ಮೂರು ತಿಂಗಳ ಹಿಂದೆ ಅನ್ವರ್ ಸಾದತ್ ಎಂಬವರು ತೆಂಗಿನಕಾಯಿ ಕೀಳಲು ಹೋದ ವೇಳೆ ಮಗಳಿಗಾಗಿ ಮಾವು ಕೀಳಲು ಅನುಮತಿ ಪಡೆದು ಮರ ಹತ್ತಿ ಕೊಂಬೆ ಅಲ್ಲಾಡಿಸಿದಾಗ ಹೊಳೆಯುತ್ತಿರುವ ವಸ್ತೊಂದು ಮರದಿಂದ ಕೆಳಗೆ ಬಿದ್ದಿದೆ. ಅದನ್ನು ಪುತ್ರಿ ಫಾತಿಮಾ ಹುದಾ ಗಮನಿಸಿದ್ದಾಳೆ. ಬಳಿಕ ಅದು ಚಿನ್ನವೇ ಎಂದು ಪರಿಶೀಲಿಸಿದಾಗ ಬಳೆ ತುಂಡಾಗಿದ್ದು, ಅಸಲಿ ಚಿನ್ನವೆಂಬುದು ಖಚಿತವಾಗಿದೆ. ರುಕ್ಮಿಣಿ ಮನೆಯಿಂದ ಕೇವಲ 50 ಮೀಟರ್ ದೂರದಲ್ಲೇ ಈ ಚಿನ್ನದ ಬಳೆ ಪತ್ತೆಯಾಗಿದೆ.

Leave a Reply

Your email address will not be published. Required fields are marked *

error: Content is protected !!