ಉದಯವಾಹಿನಿ, ಬೆಂಗಳೂರು: ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್‌ ಅವರು ಮಹಾನಗರಪಾಲಿಕೆಗಳ ನೌಕರರ ಸಂಘದ ಪದಾಧಿಕಾರಿಗಳೊಂದಿಗೆ ನಡೆಸಿದ ಸಂಧಾನ ಸಭೆ ಫಲಪ್ರದವಾಗಿದ್ದು, ಮುಷ್ಕರ ಕೈಬಿಡುವುದಾಗಿ ನೌಕರರು ಪ್ರಕಟಿಸಿದ್ದಾರೆ.ವಿಕಾಸಸೌಧದಲ್ಲಿ ರಾಜ್ಯದ ಮಹಾನಗರ ಪಾಲಿಕೆ ನೌಕರರ ಸಂಘದ ಅಧ್ಯಕ್ಷ ಅಮೃತರಾಜ್‌ ಮತ್ತು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ನೇತೃತ್ವದ ಪದಾಧಿಕಾರಿಗಳೊಂದಿಗೆ ಸಚಿವರು ನಡೆಸಿದ ಸಭೆಯಲ್ಲಿ ಈ ತೀರ್ಮಾನಕ್ಕೆ ಬರಲಾಗಿದೆ. ಮಹಾನಗರ ಪಾಲಿಕೆಗಳ ಸಾಮಾನ್ಯ ನೇಮಕಾತಿ ನಿಯಮಗಳು 2011 ಕ್ಕೆ ಸಮಗ್ರ ತಿದ್ದುಪಡಿ ಮಾಡುವುದು, ಮಹಾನಗರ ಪಾಲಿಕೆ ನೌಕರರನ್ನು ಪೂರ್ಣ ಪ್ರಮಾಣದಲ್ಲಿ ಸರ್ಕಾರಿ ನೌಕರರೆಂದು ಪರಿಗಣಿಸುವುದು, ಸರ್ಕಾರಿ ನೌಕರರ ರೀತಿಯಲ್ಲಿ ಮಹಾನಗರ ಪಾಲಿಕೆಗಳ ಅಧಿಕಾರಿಗಳು ಮತ್ತು ನೌಕರರಿಗೂ ಕೆಜಿಐಡಿ, ಜಿಐಎಸ್‌‍ ಮತ್ತು ಜಿಪಿಎಫ್‌ ಸೌಲಭ್ಯಗಳನ್ನು ನೀಡುವುದು ಸೇರಿದಂತೆ ಹಲವು ಬೇಡಿಕೆಗಳನ್ನು ನೌಕರರ ಸಂಘಗಳು ಸರ್ಕಾರ ಮುಂದಿಟ್ಟಿದ್ದವು.

ಈ ಬಗ್ಗೆ ಸಭೆ ನಡೆಸಿದ ಬಳಿಕ ಸಭೆಯ ಬಗ್ಗೆ ಮಾಹಿತಿ ನೀಡಿದ ಸಚಿವ ಬೈರತಿ ಸುರೇಶ ಅವರು, ಪಾಲಿಕೆ ನೌಕರರಿಗೆ ಸಕಾಲಕ್ಕೆ ವೇತನ ನೀಡುವುದು, ಸಿ ಅಂಡ್‌ ಆರ್‌ ನಿಯಮಗಳಿಗೆ ತಿದ್ದುಪಡಿ ತರುವ ಕುರಿತು ಆರ್ಥಿಕ ಇಲಾಖೆ ಅನುಮೋದನೆ ಪಡೆಯುವಂತೆ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ತಿಳಿಸಿದರು.

Leave a Reply

Your email address will not be published. Required fields are marked *

error: Content is protected !!