ಉದಯವಾಹಿನಿ, ಬೆಂಗಳೂರು: ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಮುಂದಿನ ಆ.5 ರಿಂದ ಕೆಎಸ್‌ಆರ್‌ಟಿಸಿ , ಬಿಎಂಟಿಸಿ ಸೇರಿದಂತೆ ನಾಲ್ಕು ನಿಗಮಗಳ ನೌಕರರ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಲಾಗಿದೆ. ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಆ.5ರಂದು ಬೆಳಿಗ್ಗೆ 6 ಗಂಟೆಯಿಂದ ಮುಷ್ಕರ ಆರಂಭವಾಗಲಿದೆ. ಜನವರಿಯಲ್ಲೇ 4 ನಿಗಮದ ಸಾರಿಗೆ ನೌಕರರಿಗೆ 38 ತಿಂಗಳ ಭತ್ಯೆಹೆಚ್ಚಳ ಮಾಡಬೇಕಿತ್ತು ಆದರೆ ಈವರೆಗೆ ಮಾಡಿಲ್ಲ. ಹೀಗಾಗಿ ಸರ್ಕಾರದ ನಡೆ ಖಂಡಿಸಿ ಮುಷ್ಕರಕ್ಕೆ ಕರೆ ನೀಡಲಾಗಿದೆ.ಮುಷ್ಕರದ ಬಗ್ಗೆ ಈಗಾಗಲೆ ನಿಯಮಾನುಸಾರ ಸಿಎಂ ಸಿದ್ದರಾಮಯ್ಯಗೆ ನೋಟಿಸ್ ಕಳಿಸಿದ್ದೇವೆ ಎಂದು ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ತಿಳಿಸಿದ್ದಾರೆ. ಸಾರಿಗೆ ಮುಷ್ಕರದ ಬಗ್ಗೆ ಸಿಎಂಗೆ ಮಂಗಳವಾ ಮುಷ್ಕರದ ಕೈಗೊಳ್ಳುತ್ತಿರುವ ಬಗ್ಗೆ ತಿಳಿಸಿದ್ದೇವೆ ಈ ಭಾರಿ ಯಾವುದೇ ರಾಜಿ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. 4 ನಿಗಮದಲ್ಲಿ 1 ಲಕ್ಷದ 15 ಸಾವಿರ ನೌಕರರಿಗೆ 38 ತಿಂಗಳ ಭತ್ಯೆ ನೀಡಬೇಕಿತ್ತು. ಆದರೆ 2025 ಜುಲೈ ಬಂದರೂ ಇನ್ನೂ ಸಂಬಳ ಹೆಚ್ಚಳ ಮಾಡಲು ಮುಂದಾಗಿಲ್ಲ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
