ಉದಯವಾಹಿನಿ, ಬೆಂಗಳೂರು: ಕಿರಣ್ ರಾಜ್ ನಾಯಕನಾಗಿ ನಟಿಸುತ್ತಿರುವ ʼಜಾಕಿ-42ʼ ಚಿತ್ರಕ್ಕೆ (Jockey 42 Movie) ಹೃತಿಕಾ ಶ್ರೀನಿವಾಸ್ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಮಾಡರ್ನ್ ಹಾಗೂ ಹೋಮ್ಲಿ ಎರಡು ಶೇಡ್ ಇರುವ ಪಾತ್ರ ಇದಾಗಿದೆ. ಹೃತಿಕ ಶ್ರೀನಿವಾಸ್, ಯೋಗರಾಜ್ ಭಟ್ ಸಿನಿಮಾಸ್ ಹಾಗೂ ರವಿ ಶಾಮನೂರು ನಿರ್ಮಾಣದ ʼಉಡಾಳʼ ಚಿತ್ರದಲ್ಲಿ ನಾಯಕಿಯಾಗಿ ಅಭಿನಯಿಸಿದ್ದಾರೆ. ಸದ್ಯ ತೆಲುಗು ಚಿತ್ರವೊಂದರ ಚಿತ್ರೀಕರಣದಲ್ಲಿ ಬ್ಯುಸಿ ಆಗಿರುವ ಅವರು ಸದ್ಯದಲ್ಲೇ ʼಜಾಕಿ-42ʼ ಚಿತ್ರ ತಂಡ ಸೇರಿಕೊಳ್ಳಲಿದ್ದಾರೆ.

ʼಜಾಕಿ-42ʼ ಹಾರ್ಸ್ ರೇಸ್ ಹಿನ್ನೆಲೆಯಲ್ಲಿ ಕಥೆ ಸಾಗುತ್ತದೆ. ಗೋಲ್ಡನ್ ಗೇಟ್ ಸ್ಟುಡಿಯೋಸ್ ಬ್ಯಾನರ್‌ನಲ್ಲಿ ಭಾರತಿ ಸತ್ಯನಾರಾಯಣ ಈ ಚಿತ್ರ ನಿರ್ಮಿಸುತ್ತಿದ್ದಾರೆ. ತೆಲುಗು ಹಾಗೂ ತಮಿಳಿನ ಜನಪ್ರಿಯ ಚಿತ್ರಗಳಿಗೆ ಸಂಗೀತ ನೀಡಿರುವ ಖ್ಯಾತ ಸಂಗೀತ ನಿರ್ದೇಶಕ ವಿನೋದ್ ಯಜಮಾನಿ ʼಜಾಕಿ-42ʼ ಗೆ ಸಂಗೀತ ನೀಡುತ್ತಿದ್ದಾರೆ. ತಂತ್ರಜ್ಞರ ತಂಡದಲ್ಲಿ ರಾಘವೇಂದ್ರ ಬಿ ಕೋಲಾರ್, ಉಮೇಶ್ ಆರ್.ಬಿ., ಸತೀಶ್ ಪೆರ್ಡೂರು ಕೆಲಸ ಮಾಡುತ್ತಿದ್ದಾರೆ. ಕನ್ನಡ, ತಮಿಳು ಹಾಗೂ ತೆಲುಗಿನ ಹೆಸರಾಂತ ಕಲಾವಿದರು ತಾರಾಗಣದಲ್ಲಿದ್ದಾರೆ. ಈಗಾಗಲೇ ಹಾರ್ಸ್ ರೇಸ್ ಭಾಗದ ಚಿತ್ರೀಕರಣ ಬೆಂಗಳೂರಿನಲ್ಲಿ ನಡೆಯುತ್ತಿದೆ. ಸದ್ಯದಲ್ಲೇ ಚಿತ್ರದ ಟೀಸರ್ ಬಿಡುಗಡೆಯಾಗಲಿದೆ ಎಂದು ನಿರ್ದೇಶಕ ಗುರುತೇಜ್ ಶೆಟ್ಟಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!