ಉದಯವಾಹಿನಿ, ಕೊಪ್ಪಳ: ಏಕಾಏಕಿ ಎದೆನೋವು ಕಾಣಿಸಿಕೊಂಡು ಯೋಗ ಶಿಕ್ಷಕರೊಬ್ಬರು ಮೃತಪಟ್ಟಿರುವುದು ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹಿರೇಬೆನಕಲ್‌ನಲ್ಲಿ ನಡೆದಿದೆ. ಬಹದ್ದೂರ ಬಂಡಿ ಗ್ರಾಮದ ಶಾಂತವೀರ ಸ್ವಾಮಿ ಗಂಗಾಧರ ಮಠ (57) ಮೃತರು. ಇವರು ಹಿರೇಬೆನಕಲ್ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯ ಹಾಗೂ ಯೋಗ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಶುಕ್ರವಾರ ಬೆಳಗಿನ ಜಾವ ಎದೆನೋವು ಕಾಣಿಸಿಕೊಂಡ ಹಿನ್ನೆಲೆ ಹುಬ್ಬಳ್ಳಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಹೃದಯಾಘಾತದಿಂದ ಎರಡೇ ದಿನದಲ್ಲಿ ಮೂವರು ಸಾವನ್ನಪ್ಪಿರುವುದು ವರದಿಯಯಾಗಿದೆ.
