
ಉದಯವಾಹಿನಿ ,ಮಂಡ್ಯ: ಮೈಸೂರಿನಲ್ಲಿ ಕಾಂಗ್ರೆಸ್ ಸಾಧನಾ ಸಮಾವೇಶ ಮುಗಿಸಿ ವಾಪಸ್ ಬರುವ ವೇಳೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಗೌಡಹಳ್ಳಿ ಬಳಿ ಅಪಘಾತ ನಡೆದಿದೆ. ಡಿವೈಡರ್‌ಗೆ ಡಿಕ್ಕಿಯಾಗಿ ಕಾರು ಪಲ್ಟಿಯಾಗಿದ್ದು, ಸಿಬ್ಬಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಬೆಂಗಾವಲು ವಾಹನ ಪಲ್ಟಿಯಾಗಿ ಇಬ್ಬರು ಸಿಬ್ಬಂದಿ ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ. ಮೈಸೂರಿನಲ್ಲಿ ಕಾಂಗ್ರೆಸ್ ಸಾಧನಾ ಸಮಾವೇಶ ಮುಗಿಸಿ ವಾಪಸ್ ಬರುವ ವೇಳೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಗೌಡಹಳ್ಳಿ ಬಳಿ ಅಪಘಾತ ನಡೆದಿದೆ. ಡಿವೈಡರ್‌ಗೆ ಡಿಕ್ಕಿಯಾಗಿ ಕಾರು ಪಲ್ಟಿಯಾಗಿದ್ದು, ಸಿಬ್ಬಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ಮೈಸೂರು ಆಸ್ಪತ್ರೆಗೆ ದಾಖಲಿಸಲಾಗಿದೆ.
