ಉದಯವಾಹಿನಿ, ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯ ಕೂಡಲಸಂಗಮದ ಪಂಚಮಸಾಲಿಪೀಠಾಧ್ಯಕ್ಷ ಬಸವ ಜಯಮೃತ್ಯುಂಜಯ ಶ್ರೀ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಜಯಮೃತ್ಯುಂಜಯ ಶ್ರೀಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇದೇ ವೇಳೆ, ಪಂಚಮಸಾಲಿ ಮಠದಿಂದ ಬಸವ ಜಯ ಮೃತ್ಯುಂಜಯ ಶ್ರೀಗಳನ್ನು ಹೊರಹಾಕಲು ಚಿಂತನೆ ನಡೆಸಲಾಗುತ್ತಿದೆ ಎಂದು ಶಾಸಕ ಹಾಗೂ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಟ್ರಸ್ಟ್ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ್ ತಿಳಿಸಿದ್ದಾರೆ.
ಬಸವ ಜಯ ಮೃತ್ಯುಂಜಯ ಶ್ರೀಗಳಿಗೆ ತಲೆ, ವಾಂತಿ ಹಾಗು ಎದೆ ನೋವು ಕಾಣಿಸಿಕೊಂಡಿದೆ. ಹೀಗಾಗಿ ಸದ್ಯ ಬಾಗಲಕೋಟೆಯ ಖಾಸಗಿ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಚೆ ನೀಡಲಾಗುತ್ತಿದೆ. ಸದ್ಯ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದುಬಂದಿದೆ. ನಾಲ್ಕು ದಿನಗಳ ಹಿಂದೆ ಪಂಚಮಸಾಲಿ ಪೀಠಕ್ಕೆ ಬೀಗ ಹಾಕಿದ್ದು ವಿವಾದವಾಗಿತ್ತು. ಬೀಗ ಹಾಕಿದ ಹಿನ್ನೆಲೆಯಲ್ಲಿ ಜಯ ಮೃತ್ಯುಂಜಯ ಶ್ರೀಗಳು ಬಹಳ ನೊಂದುಕೊಂಡಿದ್ದರು. ಇದೀಗ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಶ್ರೀಗಳನ್ನು ಹೊರಹಾಕುತ್ತೇವೆ: ಕಾಶಪ್ಪನವರ್‌ ಸುದ್ದಿಗೋಷ್ಠಿ: ಇನ್ನೊಂದೆಡೆ ಶಾಸಕ ವಿಜಯಾನಂದ ಕಾಶಪ್ಪನವರ್ ಸುದ್ದಿಗೋಷ್ಠಿ ನಡೆಸಿ, ಕೂಡಲಸಂಗಮದ ಪಂಚಮಸಾಲಿ ಮಠದಿಂದ ಬಸವ ಜಯ ಮೃತ್ಯುಂಜಯ ಶ್ರೀಗಳನ್ನು ಹೊರಹಾಕಲು ಚಿಂತನೆ ನಡೆಯುತ್ತಿದೆ ಎಂದು ತಿಳಿಸಿದರು. ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಠದಿಂದ ಜಯಮೃತ್ಯುಂಜಯ ಶ್ರೀಗಳನ್ನು ಹೊರಹಾಕಲು ಟ್ರಸ್ಟ್ ಚಿಂತನೆ ನಡೆಸುತ್ತಿದೆ. ಕೂಡಲಸಂಗಮಪೀಠದಲ್ಲಿ ಪರ್ಯಾಯ ವ್ಯವಸ್ಥೆ ಮಾಡಲು ಚಿಂತನೆ ನಡೆಸಲಾಗುತ್ತಿದೆ ಎಂದರು.

 

Leave a Reply

Your email address will not be published. Required fields are marked *

error: Content is protected !!