ಉದಯವಾಹಿನಿ, ಮೈಸೂರು: ಶನಿವಾರ ಮೈಸೂರಿನಲ್ಲಿ ನಡೆಯಲಿರುವ ಕಾಂಗ್ರೇಸ್ ಸರ್ಕಾರದ ಸಾಧನಾ ಸಮಾವೇಶಕ್ಕೆ ಭರ್ಜರಿ ತಯಾರಿಯೊಂದಿಗೆ ಸಿದ್ಧಗೊಂಡಿದೆ. ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಇಂದು ಬೆಳಗ್ಗೆ 11 ಗಂಟೆಗೆ  ಕಾಂಗ್ರೇಸ್ ಸರ್ಕಾರದ ಸಾಧನಾ ಸಮಾವೇಶ ನಡೆಯಲಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಸೇರಿ ಹಲವು ಕಾಂಗ್ರೇಸ್ ನಾಯಕರು ಭಾಗಿಯಾಗಲಿದ್ದಾರೆ. ಈ ಸಂದರ್ಭದಲ್ಲಿ 2,600 ಕೋಟಿ ವೆಚ್ಚದ ಕಾಮಗಾರಿಗೆ ಗುದ್ದಲಿ ಪೂಜೆ ಮತ್ತು ಲೋಕಾರ್ಪಣೆಯನ್ನು ಸಿಎಂ ಸಿದ್ಧರಾಮಯ್ಯ ನೆರವೇರಿಸಲಿದ್ದಾರೆ.
ಇಂದಿನ ಸಾಧನಾ ಸಮಾವೇಶದ ಮೂಲಕ ಹಳೇ ಮೈಸೂರು ಭಾಗದಲ್ಲಿ ಆಡಳಿತಾರೂಢ ಕಾಂಗ್ರೇಸ್  ಪಕ್ಷದಿಂದ ಶಕ್ತಿ ಪ್ರದರ್ಶನ ನಡೆಸಲಾಗುತ್ತಿದೆ. ಈ ಸಮಾವೇಶದ ಜವಾಬ್ದಾರಿಯನ್ನು ಸಿಎಂ ಆಪ್ತ ಮತ್ತು ಸಚಿವ ಡಾ.ಹೆಚ್.ಸಿ ಮಹಾದೇವಪ್ಪ ಅವರಿಗೆ ನೀಡಲಾಗಿದೆ. ಸಾಧನಾ ಸಮಾವೇಶಕ್ಕೆ ಈಗಾಗಲೇ ಮೈಸೂರು, ಚಾಮರಾಜನಗರ ಜಿಲ್ಲೆ ಶಾಸಕರ ಜೊತೆ ಸಭೆ ನಡೆಸಲಾಗಿದೆ. ಸಮಾವೇಶಕ್ಕೆ ಹೆಚ್ಚಿನ ಜನರನ್ನು ಕರೆತರಲು ಪ್ಲಾನ್ ಕೂಡ ಮಾಡಲಾಗಿದೆ. 1 ಲಕ್ಷಕ್ಕೂ ಹೆಚ್ಚು ಜನರನ್ನು ಸೇರಿಸುವ ಸಾಧ್ಯತೆ ಇದೆ.
ಸಮಾವೇಶಕ್ಕೆ ಬೃಹತ್ ವೇದಿಕೆ ಸಜ್ಜಾಗಿದ್ದು, ಮಹಾರಾಜ ಮೈದಾನದಲ್ಲಿ ಜರ್ಮನ್ ಟೆಂಟ್‌ನಲ್ಲಿ ಬೃಹತ್ ಗಾತ್ರದ ವೇದಿಕೆ ನಿರ್ಮಾಣ ಮಾಡಲಾಗಿದೆ. ವೇದಿಕೆಯ ಮಧ್ಯದಲ್ಲಿ ಸಿಎಂ ಸಿದ್ದರಾಮಯ್ಯ ನಡೆದುಕೊಂಡು ಹೋಗೋದಕ್ಕೆ ಸ್ಪೆಷಲ್ ಟ್ರ‍್ಯಾಕ್ ನಿರ್ಮಿಸಲಾಗಿದ್ದು, ಸುಮಾರು 200 ಮೀಟರ್ ನಡೆದುಕೊಂಡು ಹೋಗಬೇಕಾಗುತ್ತದೆ.ಸರ್ಕಾರದ ಐದು ಗ್ಯಾರೆಂಟಿ ಯೋಜನೆಗಳ ಕುರಿತು ಕಲಾಕೃತಿ ತಯಾರಿ ಮಾಡಲಾಗಿದ್ದು, ಕೃಷಿ ಅಧಿಕಾರಿಗಳಿಂದ ಚಿತ್ತಾಕರ್ಷಕ ರಂಗೋಲಿ ಸಿದ್ಧವಾಗುತ್ತಿದೆ. ಸಮಾವೇಶಕ್ಕೆ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಬರುವ ನಿರೀಕ್ಷೆ ಇದೆ. ಸಮಾವೇಶದ ವೇಳೆ ಅವಘಡ ಸಂಭವಿಸದಂತೆ ಪೊಲೀಸರು ಹೈ ಅಲರ್ಟ್ ಆಗಿದ್ದಾರೆ. ಬೃಹತ್ ವೇದಿಕೆಯನ್ನು ನಿನ್ನೆ ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ಸ್ಥಳಕ್ಕೆ ಭೇಟಿ ನೀಡಿ ಸಿದ್ಧತೆ ಪರಿಶೀಲಿಸಿದರು.

Leave a Reply

Your email address will not be published. Required fields are marked *

error: Content is protected !!