ಉದಯವಾಹಿನಿ, ಗಾಂಧಿನಗರ: ಪೊಲೀಸ್ ಅಧಿಕಾರಿಯ ಮಗ ಚಲಾಯಿಸುತ್ತಿದ್ದ ಕಾರು ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿರುವ ಘಟನೆ ಗುಜರಾತ್ ನಲ್ಲಿ ನಡೆದಿದೆ. ಪೊಲೀಸ್ ಅಧಿಕಾರಿಯ ಮಗ ತನ್ನ ಸ್ನೇಹಿತನೊಂದಿಗೆ ಜನನಿಬಿಡ ರಸ್ತೆಯಲ್ಲಿ ಕಾರು ರೇಸ್ ಮಾಡುತ್ತಿದ್ದಾಗ ಈ ಘಟನೆ ನಡೆದಿದೆ. ಅಪಘಾತದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ವೇಗವಾಗಿ ಬಂದ ಬಿಳಿ ಕಾರು ಪಾದಚಾರಿಗಳಿಗೆ ಡಿಕ್ಕಿ ಹೊಡೆದು ಬಳಿಕ ಸ್ಕೂಟರ್‌ಗೆ ಗುದ್ದುತ್ತಿರುವುದು ಕಂಡು ಬಂದಿದೆ. ಘಟನೆಯ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸ್ ಅಧಿಕಾರಿಯೇ ಮಗನನ್ನು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.
ಗುಜರಾತ್ ಪೊಲೀಸ್ ಅಧಿಕಾರಿಯ ಮಗ ಸ್ನೇಹಿತನ ಜತೆ ಕಾರು ರೇಸ್ ನಡೆಸುತ್ತಿದ್ದಾಗ ಪಾದಚಾರಿಗಳಿಬ್ಬರಿಗೆ ಡಿಕ್ಕಿ ಹೊಡೆದಿದ್ದಾನೆ. ಇದರಿಂದ ಇಬ್ಬರು ಸಾವನ್ನಪ್ಪಿದ್ದಾರೆ. ಪೊಲೀಸ್ ಅಧಿಕಾರಿಯ ಮಗ ಮತ್ತು ಆತನ ಸ್ನೇಹಿತ ಎಸ್‌ಯುವಿ ರೇಸ್ ನಡೆಸುತ್ತಿದ್ದರು. ಈ ಸಂದರ್ಭದಲ್ಲಿ ಪೊಲೀಸ್ ಅಧಿಕಾರಿಯ ಮಗ ಚಲಾಯಿಸುತ್ತಿದ್ದ ಬಿಳಿ ಬಣ್ಣದ ಕಾರು ಪಾದಚಾರಿಗಳಿಗೆ ಡಿಕ್ಕಿ ಹೊಡೆದು ಬಳಿಕ ಸ್ಕೂಟರ್‌ಗೆ ಡಿಕ್ಕಿಯಾಗಿದೆ ಎಂದು ಮೂಲಗಳು ತಿಳಿಸಿವೆ.ಗುಜರಾತ್‌ನ ಭಾವನಗರದ ಪೊಲೀಸ್ ಅಧಿಕಾರಿಯ ಮಗ ಹರ್ಷರಾಜ್ ಸಿಂಗ್ ಗೋಹಿಲ್ (20) ಈ ಅಪಘಾತದ ಪ್ರಮುಖ ಆರೋಪಿ. ಆತ ತನ್ನ ಸ್ನೇಹಿತನೊಂದಿಗೆ ಕಲಿಯಬೀಡ್ ಪ್ರದೇಶದ ಜನದಟ್ಟಣೆಯ ರಸ್ತೆಯಲ್ಲಿ ಸಂಜೆ ವೇಳೆ ಕಾರು ರೇಸಿಂಗ್ ನಡೆಸುತ್ತಿದ್ದ. ಈ ವೇಳೆ ನಡೆದ ಅಪಘಾತದ ದೃಶ್ಯವಾಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ.
