ಉದಯವಾಹಿನಿ, ನವದೆಹಲಿ: ಇಂಗ್ಲೆಂಡ್ ವಿರುದ್ಧ ಯೂಥ್ ಟೆಸ್ಟ್ ಪಂದ್ಯದಲ್ಲಿ ಭಾರತದ ಕಿರಿಯರ ತಂಡದ ಆರಂಭಿಕ ಬ್ಯಾಟ್ಸ್‌ಮನ್ ವೈಭವ್ ಸೂರ್ಯವಂಶಿ ಅವರು ಅರ್ಧಶತಕ ಹಾಗೂ ಎರಡು ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಆ ಮೂಲಕ ಯೂಥ್ ಟೆಸ್ಟ್ ಪಂದ್ಯದಲ್ಲಿ ಅರ್ಧಶತಕ ಹಾಗೂ ವಿಕೆಟ್ ಕಬಳಿಸಿದ ಅತ್ಯಂತ ಕಿರಿಯ ಆಟಗಾರ ಎಂಬ ದಾಖಲೆಯನ್ನು 14ನೇ ವಯಸ್ಸಿನ ಆಟಗಾರ ಬರೆದಿದ್ದಾರೆ. ಅಂತಿಮವಾಗಿ ಈ ಪಂದ್ಯ ಡ್ರಾನಲ್ಲಿ ಅಂತ್ಯವಾಗಿತ್ತು. ಜುಲೈ 20 ರಂದು ಎರಡನೇ ಯೂಥ್ ಟೆಸ್ಟ್ ಆರಂಭವಾಗಲಿದೆ.ಇಂಗ್ಲೆಂಡ್ ವಿರುದ್ಧ ಮೊದಲನೇ ಯೂಥ್ ಟೆಸ್ಟ್ ಪಂದ್ಯದ ಪ್ರಥಮ ಇನಿಂಗ್ಸ್‌ನಲ್ಲಿ ವೈಭವ್ ಸೂರ್ಯವಂಶಿ ಅವರು 14 ರನ್‌ಗಳನ್ನು ಗಳಿಸಿ ವಿಕೆಟ್ ಒಪ್ಪಿಸಿದ್ದರು. ಆದರೆ, ದ್ವಿತೀಯ ಇನಿಂಗ್ಸ್‌ನಲ್ಲಿ ಅತ್ಯುತ್ತಮ ಬ್ಯಾಟ್ ಮಾಡಿದ ಸೂರ್ಯವಂಶಿ 44 ಎಸೆತಗಳಲ್ಲಿ 56 ರನ್‌ಗಳನ್ನು ಕಲೆ ಹಾಕಿದ್ದಾರೆ. ನಂತರ ಬೌಲಿಂಗ್‌ನಲ್ಲಿಯೂ ಗಮನ ಸೆಳೆದಿದ್ದರು. ಅವರು ತಮ್ಮ ಸ್ಪಿನ್ ಮೋಡಿಯ ಮೂಲಕ ಪ್ರಥಮ ಇನಿಂಗ್ಸ್‌ನಲ್ಲಿ ಎರಡು ವಿಕೆಟ್ ಕಿತ್ತಿದ್ದರು. ಆ ಮೂಲಕ ಯೂಥ್ ಟೆಸ್ಟ್ ಇತಿಹಾಸದಲ್ಲಿ ಅರ್ಧಶತಕ ಹಾಗೂ ವಿಕೆಟ್ ಪಡೆದ ಮೊದಲ ಆಟಗಾರ ಎಂಬ ದಾಖಲೆಯನ್ನು ಅವರು ತಮ್ಮ 14ನೇ ವಯಸ್ಸಿನಲ್ಲಿ ಬರೆದಿದ್ದಾರೆ.
ಯೂಥ್ ಟೆಸ್ಟ್ ಪಂದ್ಯದಲ್ಲಿ ಅರ್ಧಶತಕ ಹಾಗೂ ವಿಕೆಟ್ ಪಡೆಯುವ ಮೂಲಕ ಬಾಂಗ್ಲಾದೇಶ ತಂಡದ ಮೆಹಡಿ ಹಸನ್ ಮಿರಾಝ್ ಅವರನ್ನು ವೈಭವ್ ಸೂರ್ಯವಂಶಿ ಹಿಂದಿಕ್ಕಿದ್ದಾರೆ. ಬಾಂಗ್ಲಾ ಆಟಗಾರ 2013ರಲ್ಲಿ ಮೀರ್‌ಪುರ್‌ನಲ್ಲಿ ಶ್ರೀಲಂಕಾ ವಿರುದ್ದ 15 ವರ್ಷ 167 ದಿನಗಳ ವಯಸ್ಸಿನಲ್ಲಿ ಈ ದಾಖಲೆ ಬರೆದಿದ್ದರು. ಆದರೆ, ಸೂರ್ಯವಂಶಿ ತಮ್ಮ 14ನೇ ವಯಸ್ಸಿನಲ್ಲಿಯೇ ಈ ದಾಖಲೆಯನ್ನು ಬರೆದಿದ್ದಾರೆ.
