ಉದಯವಾಹಿನಿ, ಬೆಂಗಳೂರು: ಇಂದು ಸಚಿವ ಪ್ರಿಯಾಂಕ್ ಖರ್ಗೆ ಅವರು, ಕೆಪಿಸಿಸಿ ಸಂವಹನ ವಿಭಾಗದ ಉಪಾಧ್ಯಕ್ಷರಾದ ರಮೇಶ್ ಬಾಬು ಅವರ ಜತೆಗೂಡಿ ಹೈಗ್ರೌಂಡ್ಸ್ ಪೋಲೀಸ್ ಠಾಣೆಯಲ್ಲಿ ಬಿಜೆಪಿ ರಾಷ್ಟ್ರೀಯ ಐಟಿ ಸೆಲ್ ಅಧ್ಯಕ್ಷ ಅಮಿತ್ ಮಾಳವಿಯಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ, ಚಂಡೀಗಢ ಬಿಜೆಪಿ ಐಟಿ ಸೆಲ್ ರಾಜ್ಯಾಧ್ಯಕ್ಷ ಅರುಣ್ ಸೂದ್ ವಿರುದ್ಧ ದೂರು ದಾಖಲಿಸಿದರು. ಇಂದು ಹೈಗ್ರೌಂಡ್ ಪೊಲೀಸ್ ಠಾಣೆಗೆ ತೆರಳಿದಂತ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಮಾಜಿ ಪರಿಷತ್ ಸದಸ್ಯ ರಮೇಶ್ ಬಾಬು ಅವರು, ಬಿಜೆಪಿ ರಾಷ್ಟ್ರೀಯ ಐಟಿ ಸೆಲ್ ಅಧ್ಯಕ್ಷ ಅಮಿತ್ ಮಾಳವಿಯಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ, ಚಂಡೀಗಢ ಬಿಜೆಪಿ ಐಟಿ ಸೆಲ್ ರಾಜ್ಯಾಧ್ಯಕ್ಷ ಅರುಣ್ ಸೂದ್ ವಿರುದ್ಧ ದೂರು ನೀಡಿದರು.
ಅವರು ನೀಡಿದಂತ ದೂರಿನ ಪತ್ರದಲ್ಲಿ ಹೀಗಿದೆ. ಜೂನ್ 17ರಂದು ಅಮಿತ್ ಮಾಳವಿಯಾ ಅವರು ತಮ್ಮ ಖಾತೆಯಲ್ಲಿ ಅನಿಮೇಟೆಡ್ ವಿಡಿಯೋ ಪೋಸ್ಟ್ ಮಾಡಿದ್ದು, ಅದರಲ್ಲಿ ಕಾಂಗ್ರೆಸ್ ಪಕ್ಷ ದೇಶದ್ರೋಹಿ ಚಟುವಟಿಕೆಯಲ್ಲಿ ಭಾಗವಹಿಸುತ್ತಿದೆ. ರಾಹುಲ್ ಗಾಂಧಿ ಅವರು ವಿದೇಶಕ್ಕೆ ಹೋಗಿ ಭಾರತ ವಿರೋಧಿ ಚಟುವಟಿಕೆ ಮಾಡುತ್ತಿದ್ದಾರೆ, ಕಾಂಗ್ರೆಸ್ ಹಾಗೂ ರಾಹುಲ್ ಗಾಂಧಿ ದೇಶ ಒಡೆಯುವ ಕೆಲಸ ಮಾಡುತ್ತಿದ್ದಾರೆ ಎಂದು ವಿಡಿಯೋದಲ್ಲಿ ತೋರಿಸಲಾಗಿದೆ.
