ಉದಯವಾಹಿನಿ, ಕೋಲಾರ: ಕೋಲಾರದ ಗಡಿಯಲ್ಲಿ ಕಲಬೆರೆಕೆ ಹಾಲು ತಯಾರಿಕಾ ಘಟಕದ ಮೇಲೆ ಪೊಲೀಸರ ದಾಳಿ ವಿಚಾರಕ್ಕೆ ಸಂಬಂಧಿಸಿದಂತೆ ಹಾಲಿನಲ್ಲಿ ಕೆಮಿಕಲ್ ಅಂಶ ಇರುವುದು ಪತ್ತೆಯಾಗಿದೆ. ಕೋಲಾರದಲ್ಲಿ ಆಹಾರ ಇಲಾಖೆ ಹಾಗು ಪೊಲೀಸರು ಹಾಲಿಗೆ ಪೌಡರ್ ಮಿಶ್ರಣ ಮಾಡುತ್ತಿದ್ದ ಘಟಕದ ಮೇಲೆ ದಾಳಿ ಮಾಡಿದ್ದ ಪ್ರಕರಣದಲ್ಲಿ ಕೆಮಿಕಲ್ ಇರುವುದು ಲ್ಯಾಬ್ ವರದಿಯಲ್ಲಿ ಪತ್ತೆಯಾಗಿದೆ. ಕೆಮಿಕಲ್ ಮಿಶ್ರಿತ ಹಾಲಿನಲ್ಲಿ ಅಸುರಕ್ಷಿತ ಹಾಗೂ ಆರೋಗ್ಯಕ್ಕೆ ಹಾನಿಕಾರಕ ಇರುವ ಅಂಶ ಪತ್ತೆಯಾಗಿದೆ. ಕೆಮಿಕಲ್ ಮಿಶ್ರಿತ ಹಾಲು ತಯಾರಿಸುತ್ತಿದ್ದ ಘಟಕದ ಮೇಲೆ ದಾಳಿ ಮಾಡಿದ್ದ ಪೊಲೀಸರು ಹಾಗೂ ಆಹಾರ ಇಲಾಖೆ ಅಧಿಕಾರಿಗಳ ತಂಡ ಕೆಮಿಕಲ್ ಮಿಶ್ರಿತ ಹಾಲು ಸಂಗ್ರಹ ಮಾಡಿ ಲ್ಯಾಬ್‌ಗೆ ಕಳುಹಿಸಿತ್ತು. ಸದ್ಯ ವರದಿ ಪೊಲೀಸರ ಕೈ ಸೇರಿದ್ದು, ವರದಿಯಲ್ಲಿ ಕೆಮಿಕಲ್ ಅಂದ್ರೆ ಜನರು ಉಪಯೋಗಿಸಲು ಅಸುರಕ್ಷಿತ ಹಾಗೂ ಆರೋಗ್ಯಕ್ಕೆ ಹಾನಿಕಾರಕ ಅಂಶ ಇರುವುದು ಪತ್ತೆಯಾಗಿದೆ ಎಂದು ಕೋಲಾರ ಎಸ್ಪಿ ನಿಖಿಲ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!