ಉದಯವಾಹಿನಿ, ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11ಕೆವಿ ಸಹಕಾರನಗರ ಉಪಕೇಂದ್ರ ವ್ಯಾಪ್ತಿಯಲ್ಲಿ ಇದೇ ಜುಲೈ 21 (ಸೋಮವಾರ), ಜು.22 (ಮಂಗಳವಾರ) ಬೆಂಗಳೂರು ನಗರದ ಹಲವೆಡೆ ವಿದ್ಯುತ್ ವ್ಯತ್ಯಯ ಆಗಲಿದೆ. ಅಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ) ಪೂರೈಕೆಯಲ್ಲಿ ವ್ಯತ್ತಯ ಉಂಟಾಗಲಿದೆ ಎಂದು ಕೆಪಿಟಿಸಿಎಲ್ ಪ್ರಕಟಣೆಯಲ್ಲಿ ತಿಳಿಸಿದೆ.
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ:?
ಬೆಂಗಳೂರು ನಗರದ ಎ ಬ್ಲಾಕ್, ಇ ಬ್ಲಾಕ್, ಬಳ್ಳಾರಿ ಮುಖ್ಯ ರಸ್ತೆ, ಜಿ-ಬ್ಲಾಕ್, ಎಫ್ ಬ್ಲಾಕ್, ತಲಕಾವೇರಿ ಲೇಔಟ್, ಅಮೃತಹಳ್ಳಿ, ಬಿಜಿಎಸ್ ಲೇಔಟ್, ನವ್ಯನಗರ ಬ್ಲಾಕ್, ಶಬರಿ ನಗರ, ಬೈತರಾಯನಪುರ ಜಕ್ಕೂರು ಬಡಾವಣೆ, ಜಿಕೆವಿಕೆ ಲೇಔಟ್, ಜಕ್ಕೂರು ಪ್ಲಾಂಟೇಶನ್, ಯೋಷಾದ ನಗರಾಮೃತಹಳ್ಳಿ, ಅಮೃತಹಳ್ಳಿ ಬಿ ಬ್ಲಾಕ್, ಸಿ ಬ್ಲಾಕ್, ಸಿಕ್ಯುಎಎಲ್ ಲೇಯೋಟ್, ಡಿ ಬ್ಲಾಕ್, ಇ ಬ್ಲಾಕ್, ಸಂಪಿಗೆಹಳ್ಳಿ, ಅಗ್ರಹಾರ ಗ್ರಾಮ, ಜಯಸೂರ್ಯ ಲೇಔಟ್, ವಿಧಾನಸೌಧ ಲೇಔಟ್ ಸಾಯಿಬಾಬಾ ಲೇಔಟ್, ಟೆಲಿಕಾಂ ಲೇಔಟ್, ಎಂಸಿಇಸಿಎಚ್ಎಸ್ ಲೇಔಟ್, ಎಂಸಿಇಸಿಎಚ್ಎಸ್ ಲೇಔಟ್, ಎಂಸಿ ಪಿಎಚ್‌ಎಸ್ ಲೇಔಟ್, ಸೂರ್ಯೋನಗರ, ಅಗ್ರಹಾರ ಲೇಔಟ್, ಕೋಗಿಲು ಲೇಔಟ್, ಶ್ರೀನಿವಾಸಪುರಜಕ್ಕೂರು, ವಿಆರ್‌ಎಲ್ ರಸ್ತೆ (ಸಂತೆ ರಸ್ತೆ), ಐಎಎಸ್ ರಸ್ತೆ, ಅರ್ಕಾವತಿ ಲೇಔಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆ.
