ಉದಯವಾಹಿನಿ, ನವದೆಹಲಿ: ಜು.23ರಿಂದ 26ರವರೆಗೆ ಪ್ರಧಾನಿ ಮೋದಿ ಅವರು ವಿದೇಶ ಪ್ರವಾಸಕ್ಕೆ ತೆರಳಲಿದ್ದು, ಈ ಬಾರಿ ಬ್ರಿಟನ್ ಮತ್ತು ಮಾಲ್ಡೀವ್ಸ್‌ಗೆ ಭೇಟಿ ನೀಡಲಿದ್ದಾರೆ.ಈ ಭೇಟಿಯು ಭಾರತ-ಯುಕೆ ದ್ವಿಪಕ್ಷೀಯ ವಾಣಿಜ್ಯ ಒಪ್ಪಂದಕ್ಕೆ ಅಂತಿಮ ಸ್ವರೂಪ ನೀಡುವುದು ಹಾಗೂ ದ್ವಿಪಕ್ಷೀಯ ಸಂಬಂಧಗಳನ್ನು ಮತ್ತಷ್ಟು ಗಟ್ಟಿಗೊಳಿಸುವ ಪ್ರಮುಖ ಗುರಿಯನ್ನು ಹೊಂದಿದೆ.ಜು.23-24ರವರೆಗೆ ಪ್ರಧಾನಿ ಮೋದಿ ಬ್ರಿಟನ್‌ಗೆ ಭೇಟಿ ನೀಡಲಿದ್ದಾರೆ. ಈ ವೇಳೆ ಭಾರತ-ಯುಕೆ ದ್ವಿಪಕ್ಷೀಯ ವಾಣಿಜ್ಯ ಒಪ್ಪಂದಕ್ಕೆ (ಎಫ್‌ಟಿಎ) ಅಂತಿಮ ಸಹಿ ಹಾಕುವ ಸಾಧ್ಯತೆ ಇದೆ. ಮೂರು ವರ್ಷಗಳ ಚರ್ಚೆಯ ಬಳಿಕ ಮೇ ತಿಂಗಳಲ್ಲಿ ಒಪ್ಪಂದಕ್ಕೆ ಅಂತಿಮ ರೂಪ ನೀಡಲಾಗಿದ್ದು, ಇದು ಭಾರತದ ಶೇ.99ರಷ್ಟು ರಫ್ತುಗಳ ಮೇಲಿನ ಸುಂಕವನ್ನು ತೆಗೆದುಹಾಕಲಿದೆ.
ಇದರಿಂದ ಬ್ರಿಟಿಷ್ ಉತ್ಪನ್ನಗಳಾದ ವಿಸ್ಕಿ ಮತ್ತು ಆಟೋಮೊಬೈಲ್‌ಗಳಿಗೆ ಭಾರತದ ಮಾರುಕಟ್ಟೆಯಲ್ಲಿ ಸುಲಭ ಪ್ರವೇಶ ಸಿಗಲಿದೆ.
ಎಸ್&ಪಿ ಗ್ಲೋಬಲ್ ಮಾರ್ಕೆಟ್ ಇಂಟೆಲಿಜೆನ್ಸ್ ಪ್ರಕಾರ, ಈ ಒಪ್ಪಂದವು ಭಾರತಕ್ಕೆ ಗಣನೀಯ ಆರ್ಥಿಕ ಉತ್ತೇಜನ ನೀಡಲಿದೆ. 2024ರಲ್ಲಿ ಯುಕೆಯಿಂದ ಭಾರತಕ್ಕೆ 130 ಬಿಲಿಯನ್ ಡಾಲರ್‌ನಷ್ಟು (ಭಾರತದ ಜಿಡಿಪಿಯ 3.3%) ವಿದೇಶಿ ವಿನಿಮಯ ಹರಿವು ದಾಖಲಾಗಿದ್ದು, ಈ ಒಪ್ಪಂದದಿAದ ಈ ಹರಿವು ಮತ್ತಷ್ಟು ಹೆಚ್ಚಲಿದೆ. ವಿಶೇಷವಾಗಿ, ಯುಕೆಯಲ್ಲಿ ಕೆಲಸ ಮಾಡುವ ಭಾರತೀಯ ಐಟಿ ವೃತ್ತಿಪರರಿಗೆ ಮೂರು ವರ್ಷಗಳವರೆಗೆ ರಾಷ್ಟ್ರೀಯ ವಿಮೆಯಿಂದ ವಿನಾಯಿತಿ ನೀಡುವ ನಿಬಂಧನೆಯು ಅವರ ಉಳಿತಾಯ ಮತ್ತು ವಿದೇಶಿ ವಿನಿಮಯ ಹರಿವನ್ನು ಹೆಚ್ಚಿಸಲಿದೆ. 2024ರಲ್ಲಿ 56.7 ಬಿಲಿಯನ್ ಡಾಲರ್ ಆಗಿರುವ ದ್ವಿಪಕ್ಷೀಯ ವಾಣಿಜ್ಯವನ್ನು 2030ರ ವೇಳೆಗೆ ದ್ವಿಗುಣಗೊಳಿಸುವ ಗುರಿಯನ್ನು ಈ ಒಪ್ಪಂದ ಹೊಂದಿದೆ.
