ಉದಯವಾಹಿನಿ, ದೇವನಹಳ್ಳಿ : ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಕನ್ನಮಂಗಲ ಕಾಲೋನಿಯಲ್ಲಿನ ಮನೆಯೊಂದು ಧಗಧಗಿಸಿ ಉರಿದು, ಸುಟ್ಟು ಕರಕಲಾಗಿದೆ. ಮನೆಯಲ್ಲಿ ಮಲಗಿದ್ದ ಯುವಕ ಸಜೀವ ದಹನವಾಗಿದ್ದಾನೆ. ಉದಯ್ ಮೃತ ದುರ್ದೈವಿ. ಕನ್ನಮಂಗಲ ಕಾಲೋನಿಯಲ್ಲಿ ನರಸಮ್ಮ ಮತ್ತು ಮೃತ ಉದಯ್ ತಾಯಿ-ಮಗ ವಾಸ ಮಾಡುತ್ತಿದ್ದರು. ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು.

ಉದಯ್​ ಕೆಲಸ ಮುಗಿಸಿಕೊಂಡು, ಕುಡಿದು ಮನೆಗೆ ಬಂದಿದ್ದಾನೆ. ಮನೆಯಲ್ಲಿ ತಾಯಿ ನರಸಮ್ಮ ಇರಲಿಲ್ಲ. ಎಣ್ಣೆ ನಶೆಯಲ್ಲಿ ಕೋಣೆಯೊಳಗೆ ಮಲಗಿದವನಿಗೆ ಧೂಮಪಾನ ಮಾಡಬೇಕು ಅಂತ ಬಯಕೆ ಆಗಿದೆ. ಸಿಗರೇಟ್ ಹಚ್ಚಿ ಸೇದಿದ್ದಾನೆ. ಕೊನೆಗೆ ಕಿಡಿಯನ್ನು ಆರಿಸದೆ ನಶೆಯಲ್ಲಿ ಹಾಗೆ ನಿದ್ದೆಗೆ ಜಾರಿದ್ದಾನೆ. ಸಿಗರೇಟ್​ ಕಿಡಿ ಕೋಣೆಯಲ್ಲಿನ ಬಟ್ಟೆಗಳಿಗೆ ತಗುಲಿದ್ದು, ಬೆಂಕಿ ಹೊತ್ತಿಕೊಂಡಿದೆ. ಕ್ಷಣ ಮಾತ್ರದಲ್ಲಿ ಮನೆಯ ತುಂಬ ಬೆಂಕಿ ಆವರಿಸಿದೆ. ಬೆಂಕಿ ಹೊತ್ತಿಕೊಂಡರೂ ನಶೆಯಲ್ಲಿದ್ದ ಉದಯ್​ಗೆ ಎಚ್ಚರವಾಗಿಲ್ಲ. ಕುಡಿದು ನಶೆಯಲ್ಲಿ ಮಲಗಿದ್ದ ಉದಯ್​ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಚಿರನಿದ್ರೆಗೆ ಜಾರಿದ್ದಾನೆ.

Leave a Reply

Your email address will not be published. Required fields are marked *

error: Content is protected !!