ಉದಯವಾಹಿನಿ,ಬೆಂಗಳೂರು : ಗ್ರೇಟರ್​ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ ಐದು ಪಾಲಿಕೆಗಳನ್ನು ರಚನೆ ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಸರ್ಕಾರ ಐದೂ ಮಹಾನಗರ ಪಾಲಿಕೆಗಳ ಗಡಿಯನ್ನು ಗುರುತು ಮಾಡಿದೆ. ಬೃಹತ ಬೆಂಗಳೂರು ಮಹಾನಗರ ಪಾಲಿಕೆ ಕೇಂದ್ರ ಕಚೇರಿಯನ್ನು ಆಗಸ್ಟ್ 10ರೊಳಗೆ ಗ್ರೇಟರ್​ ಬೆಂಗಳೂರು ಪ್ರಾಧಿಕಾರ (GBA) ಕೇಂದ್ರ ಕಚೇರಿಯಾಗಿ ಮಾರ್ಪಾಡು ಮಾಡಲಾಗುವುದು ಎಂದು ಸರ್ಕಾರ ತಿಳಿಸಿದೆ. ಆಗಸ್ಟ್ 11ರಿಂದ ಆರಂಭವಾಗುವ ಮುಂಗಾರು ಅಧಿವೇಶನದಲ್ಲಿ ಐದು ಪಾಲಿಕೆಗಳನ್ನು ರಚನೆ ಮಾಡಿದ ವಿಚಾರವಾಗಿ ಚರ್ಚೆ ನಡೆಸಿ, ಬಿಲ್ ಪಾಸ್​ ಮಾಡಲು ಸರ್ಕಾರ ತಯಾರಿ ನಡೆಸಿದೆ. ಈ ಪಾಲಿಕೆಗಳ ರಚನೆ ಬಗ್ಗೆ ಆಕ್ಷೇಪಣೆ ಇದ್ದರೇ ಸಾರ್ವಜನಿಕರು ಸಲಹೆ ನೀಡುವಂತೆ ಸರ್ಕಾರ ಹೇಳಿದೆ.
5 ಪಾಲಿಕೆಗಳು ಯಾವ್ಯಾವು?
ಬೆಂಗಳೂರು ದಕ್ಷಿಣ ಮಹಾನಗರ ಪಾಲಿಕೆ
ಬೆಂಗಳೂರು ಉತ್ತರ ಮಹಾನಗರ ಪಾಲಿಕೆ
ಬೆಂಗಳೂರು ಕೇಂದ್ರ ಮಹಾನಗರ ಪಾಲಿಕೆ
ಬೆಂಗಳೂರು ಪಶ್ಚಿಮ ಮಹಾನಗರ ಪಾಲಿಕೆ
ಬೆಂಗಳೂರು ಪೂರ್ವ ಮಹಾನಗರ ಪಾಲಿಕೆ
ಗ್ರೇಟರ್‌ ಬೆಂಗಳೂರು ಆಡಳಿತ ವಿಧೇಯಕ-2024ರ ಅಡಿಯಲ್ಲಿ ಸರ್ಕಾರ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ರಚನೆ ಮಾಡಲಾಗಿದೆ. ಈ ಪ್ರಾಧಿಕಾರದ ಅಡಿಯಲ್ಲಿ ಐದು ಪಾಲಿಕೆಗಳನ್ನು ರಚನೆ ಮಾಡಲಾಗಿದೆ.

ಸಮಿತಿ ವರದಿಯಲ್ಲಿ ಏನಿತ್ತು..?
ಅಧಿಕಾರ ವಿಕೇಂದ್ರೀಕರಣದ ಸಲುವಾಗಿ ಬಿಬಿಎಂಪಿಯನ್ನು 7ರ ವರೆಗೆ ಎಷ್ಟು ಭಾಗಗಳಾಗಿ ಬೇಕಿದ್ದರೂ ವಿಂಗಡಿಸುವ ಕುರಿತು ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಬಿ.ಎಸ್​ ಪಾಟೀಲ್​ ನೇತೃತ್ವದ ಗ್ರೇಟರ್ ಬೆಂಗಳೂರು ಸಮಿತಿಯು ಶಿಫಾರಸು ಮಾಡಿತ್ತು. ಪಾಲಿಕೆಗಳನ್ನು ರಚನೆ ಮಾಡುವ ಸಂದರ್ಭದಲ್ಲಿ ವಾರ್ಡ್‌ಗಳ ಸಂಖ್ಯೆಯೂ ಹೆಚ್ಚಳ ಮಾಡಬೇಕು. ಪ್ರತಿ ಪಾಲಿಕೆಗೂ 100ರಿಂದ 125 ವಾರ್ಡ್‌ಗಳನ್ನು ರಚನೆ ಮಾಡಬೇಕು ಎಂದು ಪ್ರಸ್ತಾವನೆ ಸಲ್ಲಿಸಲಾಗಿತ್ತು.

Leave a Reply

Your email address will not be published. Required fields are marked *

error: Content is protected !!