ಉದಯವಾಹಿನಿ, ನವದೆಹಲಿ: ನಾಳೆಯಿಂದ ಸಂಸತ್‌ನ ಮುಂಗಾರು ಅಧಿವೇಶನ ಆರಂಭವಾಗಲಿದೆ. ಆಡಳಿತ ಮತ್ತು ವಿಪಕ್ಷಗಳ ನಡುವಿನ ಮಾತಿನ ಸಮರಕ್ಕೆ ಅಖಾಡ ಸಜ್ಜಾಗಿದೆ. ಬಿಹಾರ ವಿಧಾನಸಭಾ ಚುನಾವಣೆ ಸಮೀಪದಲ್ಲಿಯೇ ನಡೆಯಲಿರುವ ಈ ಸಂಸತ್ ಅಧಿವೇಶನ ರಾಜಕೀಯ ಸಭೆಗೆ ವೇದಿಕೆಯಾಗಲಿದೆ.ಬಿಹಾರ ವಿಧಾನಸಭಾ ಚುನಾವಣೆ ಅಕ್ಟೋಬರ್- ನವೆಂಬರ್‌ನಲ್ಲಿ ನಡೆಯಲಿರುವ ಹಿನ್ನೆಲೆಯಲ್ಲಿ, ಈ ಅಧಿವೇಶನವು ರಾಜಕೀಯ ಶಕ್ತಿಪ್ರದರ್ಶನಕ್ಕೆ ವೇದಿಕೆಯಾಗಲಿದೆ. ಇಂಡಿಯಾ ಒಕ್ಕೂಟದ ವಿರೋಧ ಪಕ್ಷಗಳಾದ ಕಾಂಗ್ರೆಸ್, ಆರ್‌ಜೆಡಿ, ಮತ್ತು ಟಿಎಂಸಿ, ಬಿಹಾರದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ, ಆಪರೇಷನ್ ಸಿಂಧೂರ, ಅಹಮದಾಬಾದ್‌ನ ಏರ್ ಇಂಡಿಯಾ ವಿಮಾನ ದುರಂತ, ಮತ್ತು ಭಾರತ-ಪಾಕಿಸ್ತಾನ ಕದನ ವಿರಾಮದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ರ ಮಧ್ಯಸ್ಥಿಕೆಯ ಬಗ್ಗೆ ಆಡಳಿತ ಪಕ್ಷವನ್ನು ತೀವ್ರವಾಗಿ ಪ್ರಶ್ನಿಸಲು ಸಿದ್ಧವಾಗಿವೆ. ಇದರ ಜೊತೆಗೆ, ಪಹಲ್ಗಾಮ್‌ನ ಭಯೋತ್ಪಾದಕ ದಾಳಿ ಮತ್ತು ವಿದೇಶಾಂಗ ನೀತಿಯಂತಹ ವಿಷಯಗಳನ್ನು ಎತ್ತಿಹಿಡಿಯಲು ವಿರೋಧ ಪಕ್ಷಗಳು ತಯಾರಿ ನಡೆಸಿವೆ.

Leave a Reply

Your email address will not be published. Required fields are marked *

error: Content is protected !!