ಉದಯವಾಹಿನಿ, ರಿಯಾದ್: 20 ವರ್ಷಗಳ ಕಾಲ ಕೋಮಾದಲ್ಲಿದ್ದ ಸ್ಲೀಪಿಂಗ್ ಪ್ರಿನ್ಸ್ ಎಂದೇ ಹೆಸರಾಗಿದ್ದ ಸೌದಿ ಅರೇಬಿಯಾದ ರಾಜಕುಮಾರ ಅಲ್ವಲೀದ್ ಬಿನ್ ಖಾಲಿದ್ ಬಿನ್ ತಲಾಲ್ ಬಿನ್ ಅಬ್ದುಲಜೀಜ್ ಅಲ್ ಸೌದ್ ನಿಧನರಾಗಿದ್ದಾರೆ. ಶನಿವಾರ ಅವರು ನಿಧನರಾಗಿದ್ದು, ಅವರ ಅಂತ್ಯಕ್ರಿಯೆ ಭಾನುವಾರ ರಿಯಾದ್‌ನಲ್ಲಿ ನಡೆಯಲಿದೆ ಎಂದು ಅವರ ತಂದೆ ಪ್ರಿನ್ಸ್ ಖಾಲೀದ್ ಬಿನ್ ತಲಾಲ್ ಬಿನ್ ಅಬ್ದುಲಜೀಜ್ ತಿಳಿಸಿದ್ದಾರೆ. 2005ರಲ್ಲಿ ಲಂಡನ್ ಮಿಲಿಟರಿ ಕಾಲೇಜಿನಲ್ಲಿ ಓದುವಾಗ ಅವರಿಗೆ ಅಪಘಾತವಾಗಿತ್ತು. ಅಂದಿನಿಂದ 20 ವರ್ಷಗಳ ಕಾಲ ಅವರು ಕೋಮಾದಲ್ಲಿದ್ದರು.
ಅಬ್ದುಲಜೀಜ್ ಅವರು ಮಗನ ಮೇಲೆ ಹೊಂದಿದ್ದ ಕರುಣೆ ವಿಶ್ವದೆಲ್ಲೆಡೆ ಹಬ್ಬಿತ್ತು. ಅವನ ಸಾವು ಬದುಕು ದೇವರಿಚ್ಛೆ ಎಂದು ಅವರು ಹೇಳಿಕೊಂಡಿದ್ದರು.

Leave a Reply

Your email address will not be published. Required fields are marked *

error: Content is protected !!