ಉದಯವಾಹಿನಿ, ಮುಂಬಯಿ: ತೂಕ ಇಳಿಸಿಕೊಳ್ಳುವುದೆಂದರೆ ಸುಲಭದ ಮಾತಲ್ಲ. ಅದಕ್ಕಾಗಿ ದೃಢಸಂಕಲ್ಪ ಬೇಕು ಮತ್ತು ಇಷ್ಟದ ಆಹಾರಗಳನ್ನು ತ್ಯಾಗ ಮಾಡಬೇಕು. ಅಲ್ಲದೆ, ಸಾಕಷ್ಟು ಸವಾಲುಗಳನ್ನೂ ಎದುರಿಸಬೇಕು. ಅಂಥದೊಂದು ಸಾಹಸಕ್ಕೆ ಕೈ ಹಾಕಿ ಟೀಮ್‌ ಇಂಡಿಯಾದ ಕ್ರಿಕೆಟಿಗ ಸರ್ಫರಾಜ್ ಖಾನ್ ಸೈ ಎನಿಸಿಕೊಂಡಿದ್ದಾರೆ. ಹೌದು ಅವರು ಕೇವಲ ಎರಡು ತಿಂಗಳ ಅಂತರದಲ್ಲಿ ಬರೋಬ್ಬರಿ 17 ಕೆಜಿ ತೂಕ ಇಳಿಸಿಕೊಂಡಿದಾರೆ. ಇತ್ತೀಚೆಗೆ ಇಂಗ್ಲೆಂಡ್ ಪ್ರವಾಸಕ್ಕಾಗಿ ಅವರು ಈ ತೂಕ ಇಳಿಸುವ ಪ್ರಯತ್ನ ಆರಂಭಿಸಿದ್ದರು. ಆರಂಭದಲ್ಲಿ 10 ಕೆಜಿ ತೂಕ ಇಳಿಸಿಕೊಂಡಿದ್ದ ಅವರು ಇದೀಗ 17 ಕೆಜಿ ತೂಕ ಕಡಿಮೆ ಮಾಡಿಕೊಂಡಿದ್ದಾರೆ. ಈ ಮೂಲಕ ಫಿಟ್‌ನೆಸ್‌ಗೆ ಹೆಚ್ಚಿನ ಮಹತ್ವ ನೀಡಿದ್ದಾರೆ. ದಪ್ಪಗಿರುವ ಮತ್ತು ಈಗ ಸಣ್ಣದಾಗಿರುವ ಫೋಟೊವನ್ನು ಸರ್ಫರಾಜ್‌ ತಮ್ಮ ಸಾಮಾಜಿಕ ಜಾಲತಾಣ ಮಾಧ್ಯಮದಲ್ಲಿ ಹಂಚಿಕೊಂಡಿದಾರೆ.
ಸರ್ಫರಾಜ್‌ ಅತಿಯಾದ ತೂಕ ಹೊಂದಿದ ಕಾರಣದಿಂದಲೇ ಅವರನ್ನು ಟೀಮ್‌ ಇಂಡಿಯಾದಿಂ ದೂರ ಇಡಲಾಗಿತ್ತು. ಇದೀಗ ತಮ್ಮ ಕ್ರಿಕೆಟ್‌ ವೃತ್ತಿಜೀವನವನ್ನು ಮುಂದುವರಿಸುವ ಪಣ ತೊಟ್ಟಿರುವ ಅವರು ತಮ್ಮ ದೇಹದ ತೂಕವನ್ನು ಕಡಿಮೆ ಮಾಡಿಕೊಂಡಿ ದೇಹವನ್ನು ಫಿಟ್ ಆ್ಯಂಡ್ ಫೈನ್ ಆಗಿ ಇರಿಸಿಕೊಂಡಿದೆ. ಮುಂಬರುವ ಕ್ರಿಕೆಟ್‌ ಸರಣಿಯಲ್ಲಿ ಅವರು ಭಾರತ ತಂಡಕ್ಕೆ ತ್ತೆ ಕಮ್‌ಬ್ಯಾಕ್‌ ಮಾಡುವ ನಿರೀಕ್ಷೆಯಲ್ಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!