ಉದಯವಾಹಿನಿ, ಕಲಬುರಗಿ: ಯುವಕನ ಕಿರುಕುಳಕ್ಕೆ ಬೇಸತ್ತು ಬೆಣ್ಣೆತೋರಾ ಡ್ಯಾಂ ಹಿನ್ನೀರಿಗೆ ಜಿಗಿದು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವುದು ಜಿಲ್ಲೆಯ ಕಮಲಾಪುರ ತಾಲೂಕಿನ ಕುರಿಕೋಟ ಗ್ರಾಮದ ಬಳಿ ನಡೆದಿದೆ. ಕಮಲಾಪುರ ತಾಲೂಕಿನ ಭೂಸಣಗಿ ಗ್ರಾಮದ ಯುವತಿ ಸಾಕ್ಷಿ ಉಪ್ಪಾರ್ (22) ಆತ್ಮಹತ್ಯೆ ಮಾಡಿಕೊಂಡ ಯುವತಿ. ಅಭಿಷೇಕ ಮಾಳಗೆ ಎಂಬ ಯುವಕ ಕಿರುಕುಳ ನೀಡಿದ್ದಾನೆ ಎನ್ನುವ ಆರೋಪ ಕೇಳಿಬಂದಿದ್ದು, ಸಾಕ್ಷಿ ಜತೆಗಿರುವ ಫೋಟೊಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಭಿಷೇಕ್ ವೈರಲ್ ಮಾಡಿದ್ದ ಎನ್ನಲಾಗಿದೆ. ಇದರಿಂದ ಬೇಸತ್ತು ಯುವತಿ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಹೇಳಲಾಗಿದೆ.
ಯುವತಿಯ ಮೃತದೇಹಕ್ಕಾಗಿ ಅಗ್ನಿಶಾಮಕ ದಳ ಸಿಬ್ಬಂದಿ, ಕುರಿಕೋಟ ಡ್ಯಾಂನಲ್ಲಿ ತೀವ್ರ ಹುಡುಕಾಟ ನಡೆಸುತ್ತಿದ್ದು, ಮಹಾಗಾಂವ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
