ಉದಯವಾಹಿನಿ, ಬೀದರ್: ಸತತ ಒಂದು ಗಂಟೆಗಳ ಕಾಲ ಸುರಿದ ಧಾರಾಕಾರ ಮಳೆಗೆ ಗಡಿಜಿಲ್ಲೆ ಬೀದರ್‌ನಲ್ಲಿ ಅವಾಂತರ ಸೃಷ್ಟಿಯಾಗಿದೆ.ಧಾರಾಕಾರ ಮಳೆಗೆ ಬೀದರ್ ನಗರದಲ್ಲಿ ಅವಾಂತರ ಸೃಷ್ಟಿಯಾಗಿದ್ದು, ಮಳೆಯ ಅಬ್ಬರಕ್ಕೆ ನಗರ ಪ್ರಮುಖ ರಸ್ತೆಗಳು ಕೆರೆಯಂತಾಗಿವೆ. ಬೀದರ್ ನಗರದ ಬೊಮ್ಮಗೊಂಡೇಶ್ವರ ವೃತ್ತದಿಂದ ಕಮಠಾಣ ಸ್ಕೂಲ್‌ವರೆಗೆ ರಸ್ತೆ ಮೇಲೆ 3-4 ಅಡಿ ನೀರು ನಿಂತ್ತು ರಸ್ತೆ ಸಂಪೂರ್ಣವಾಗಿ ಜಲಾವೃತಗೊಂಡಿದೆ. ಕೆರೆಯಂತಾದ ರಸ್ತೆ ಮೇಲೆ ಸಂಚರಿಸಲು ವಾಹನ ಸವಾರರು ಪರದಾಡುತ್ತಿದ್ದು, ಬೈಕ್‌ಗಳನ್ನು ತಳ್ಳಿಕೊಂಡು ಹೋಗುತ್ತಿದ್ದಾರೆ. ಇನ್ನೂ ಹಾಸನ ಜಿಲ್ಲೆಯ ವಿವಿಧೆಡೆ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.
ಸಕಲೇಶಪುರ, ಆಲೂರು, ಬೇಲೂರು, ಹಾಸನ ನಗರದಲ್ಲಿ ಭಾರೀ ಮಳೆಯಿಂದಾಗಿ ವಿದ್ಯಾರ್ಥಿಗಳು, ವಾಹನ ಸವಾರರು, ಬೀದಿಬದಿ ವ್ಯಾಪಾರಸ್ಥರು ಪರದಾಡುವಂತಾಗಿತ್ತು
