ಉದಯವಾಹಿನಿ, ಬೆಂಗಳೂರು: ಎರಡು ಪ್ರತ್ಯೇಕ ಪ್ರಕರಣದಲ್ಲಿ ಓರ್ವ ಶಿಕ್ಷಕಿ ಹಾಗೂ ಓರ್ವ ಹೆಡ್ ಕಾನ್ಸ್‌ಟೇಬಲ್ ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ನಡೆದಿದೆ. ನೆಲಮಂಗಲದ ಬಸವಣ್ಣ ದೇವರ ಮಠದ ಶಿಕ್ಷಕಿ ಸುಲೋಚನಾ (49) ಮನೆಯಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ನೆಲಮಂಗಲದ ಭಕ್ತನಪಾಳ್ಯದ ತಮ್ಮ ಮನಯಲ್ಲಿದ್ದಾಗ ಇದ್ದಕ್ಕಿದ್ದಂತೆ ಎದೆ ನೋವು ಕಾಣಿಸಿಕೊಂಡಿದೆ. ಅಲ್ಲೇ ಕುಸಿದುಬಿದ್ದು ಶಿಕ್ಷಕಿ ಸಾವನ್ನಪ್ಪಿದ್ದಾರೆ. ಮತ್ತೊಂದು ಪ್ರಕರಣದಲ್ಲಿ ಬೇಗೂರು ಠಾಣೆಯಲ್ಲಿ ಹೆಡ್ ಕಾನ್ಸ್‌ಟೇಬಲ್ ಆಗಿದ್ದ ನಿಜಾಮುದ್ದಿನ್ (44) ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಬೆಂಗಳೂರು ನಗರದ ಆಡುಗೋಡಿ ಪೊಲೀಸ್ ಕ್ವಾಟ್ರಸ್‌ನಲ್ಲಿ ವಾಸವಿದ್ದ ನಿಜಾಮುದ್ದೀನ್‌ಗೆ ಇಂದು ಮುಂಜಾನೆ ಎದೆನೋವು ಕಾಣಿಸಿಕೊಂಡಿದೆ. ಆಸ್ಪತ್ರೆಗೆ ಕರೆತರುವಷ್ಟರಲ್ಲಿ ಸಾವನ್ನಪ್ಪಿದ್ದಾರೆ.
