ಉದಯವಾಹಿನಿ, ತಿರುವನಂತಪುರಂ: ದೋಹಾಗೆ ಹೊರಟಿದ್ದ ಏರ್‌ಇಂಡಿಯಾ ಎಕ್ಸ್‌ಪ್ರೆಸ್ ವಿಮಾನವೊಂದರಲ್ಲಿ ತಾಂತ್ರಿಕ ಸಮಸ್ಯೆ ಉಂಟಾಗಿ ಟೇಕ್ ಆಫ್ ಆದ 2 ಗಂಟೆಗಳ ನಂತರ ಸುರಕ್ಷಿತವಾಗಿ ಮತ್ತೆ ಕ್ಯಾಲಿಕಟ್‌ಗೆ ವಾಪಸ್ಸಾಗಿದೆ.ಬುಧವಾರ ಬೆಳಿಗ್ಗೆ 9:05ರ ಸುಮಾರಿಗೆ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ IX 375 ಕ್ಯಾಲಿಕಟ್‌ನಿಂದ ಟೇಕ್ ಆಫ್ ಆಗಿ ದೋಹಾಗೆ ತೆರಳಿತ್ತು. ಮಾರ್ಗ ಮಧ್ಯೆ ವಿಮಾನದಲ್ಲಿ ತಾಂತ್ರಿಕ ಸಮಸ್ಯೆ ಎದುರಾಗಿದ್ದು, ಟೇಕ್ ಆಫ್ ಆದ 2 ಗಂಟೆಗಳ ನಂತರ 11:15 ಸುಮಾರಿಗೆ ಕ್ಯಾಲಿಕಟ್‌ಗೆ ಸುರಕ್ಷಿತವಾಗಿ ಮರಳಿದೆ.
ಈ ಕುರಿತು ಅಧಿಕಾರಿಯೊಬ್ಬರು ಮಾತನಾಡಿ, ವಿಮಾನದ ಕ್ಯಾಬಿನ್ ಎಸಿಯಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡಿತ್ತು. ಹೀಗಾಗಿ ವಿಮಾನವನ್ನು ಕ್ಯಾಲಿಕಟ್‌ನಲ್ಲಿ ಲ್ಯಾಂಡಿಂಗ್ ಮಾಡಲಾಗಿದೆ. ಇದು ತುರ್ತು ಲ್ಯಾಂಡಿಂಗ್ ಅಲ್ಲ. ಇನ್ನೂ ವಿಮಾನದಲ್ಲಿ ಸಿಬ್ಬಂದಿ ಹಾಗೂ ಪ್ರಯಾಣಿಕರು ಸೇರಿ ಒಟ್ಟು 188 ಜನರಿದ್ದರು. ವಿಮಾನ ಲ್ಯಾಂಡಿಂಗ್ ಆದ ಬಳಿಕ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಲಾಗಿದೆ ಎಂದು ತಿಳಿಸಿದ್ದಾರೆ.ಈ ಬಗ್ಗೆ ಏರ್ ಇಂಡಿಯಾ ಹೇಳಿಕೆ ಬಿಡುಗಡೆಗೊಳಿಸಿದ್ದು, ವಿಮಾನಯಾನದ ವೇಳೆ ಸುರಕ್ಷತೆ ನಮ್ಮ ಮುಖ್ಯ ಆದ್ಯತೆಯಾಗಿದೆ. ಹೀಗಾಗಿ ವಿಷಾದ ವ್ಯಕ್ತಪಡಿಸುತ್ತೇವೆ. ಇನ್ನೂ ವಿಮಾನ ವಿಳಂಬವಾಗಿದ್ದರಿಂದ ಪ್ರಯಾಣಿಕರಿಗೆ ಉಪಹಾರದ ವ್ಯವಸ್ಥೆ ಮಾಡಿಕೊಟ್ಟಿದ್ದೇವೆ. ಬಳಿಕ ಪರ್ಯಾಯ ವಿಮಾನದ ವ್ಯವಸ್ಥೆ ಮಾಡಿಕೊಡಲಾಗಿದೆ ಎಂದು ತಿಳಿಸಿದೆ.ಇದಕ್ಕೂ ಮುನ್ನ ಮಂಗಳವಾರ ಹಾಂಗ್ ಕಾಂಗ್‌ನಿಂದ ನವದೆಹಲಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದ ಏರ್ ಇಂಡಿಯಾ ವಿಮಾನವು ಲ್ಯಾಂಡಿಂಗ್ ಆದ ಕೆಲವೇ ಸಮಯದಲ್ಲಿ ವಿಮಾನದ ಎಪಿಯುನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು
