ಉದಯವಾಹಿನಿ, ಲಕ್ನೋ: ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿರುವ ಒಂದು ಭವ್ಯವಾದ ಬಂಗಲೆ… ಬಂಗಲೆಯಲ್ಲಿ ಐಷಾರಾಮಿ ಕಾರುಗಳು… ಪಶ್ಚಿಮ ಆರ್ಕ್ಟಿಕಾ, ಸಬ್ರೋಗಾ, ಪೌಲ್ವಿಯಾ ಮತ್ತು ಲೊಡೋನಿಯಾದಂತಹ ರಾಷ್ಟ್ರಗಳ ರಾಯಭಾರಿ ಕಚೇರಿ ಎಂದು ವಂಚನೆ ಮಾಡ್ತಿದ್ದ ಶಂಕಿತ ಹರ್ಷವರ್ಧನ್ ಜೈನ್‌ನನ್ನು ಯುಪಿ ಎಸ್‌ಟಿಎಫ್ ಭೇದಿಸಿ, ಬಂಧಿಸಿದೆ.ದಾಳಿಯಲ್ಲಿ ಹಲವಾರು ನಕಲಿ ಅಂಚೆಚೀಟಿಗಳು, ಪಾಸ್‌ಪೋರ್ಟ್‌ಗಳು, ರಾಜತಾಂತ್ರಿಕ ನೋಂದಣಿ ಫಲಕಗಳು, ವಿದೇಶಿ ಮತ್ತು ದೇಶೀಯ ನಗದು ವಶಪಡಿಸಿಕೊಳ್ಳಲಾಗಿದೆ.ಆರೋಪಿಯು ರಾಜತಾಂತ್ರಿಕ ನಂಬರ್ ಪ್ಲೇಟ್‌ಗಳನ್ನು ಹೊಂದಿರುವ ಹಲವಾರು ಕಾರುಗಳನ್ನು ಹೊಂದಿದ್ದ. ಜೊತೆಗೆ ಪ್ರಧಾನಿ, ರಾಷ್ಟ್ರಪತಿ ಮತ್ತು ಇತರ ಗಣ್ಯರೊಂದಿಗೆ ತಮ್ಮ ಮಾರ್ಫ್ ಮಾಡಿದ ಛಾಯಾಚಿತ್ರಗಳನ್ನು ಬಳಸಿಕೊಂಡು ಜನರ ಮೇಲೆ ಪ್ರಭಾವ ಬೀರಲು ಪ್ರಯತ್ನಿಸಿರೋದು ಬೆಳಕಿಗೆ ಬಂದಿದೆ. ದೇಶದಲ್ಲಿ ವ್ಯಕ್ತಿಗಳು ಮತ್ತು ಕಂಪನಿಗಳಿಗೆ ದಲ್ಲಾಳಿ ಮಾಡುವುದು ಮತ್ತು ಶೆಲ್ ಕಂಪನಿಗಳ ಮೂಲಕ ಹವಾಲಾ ದಂಧೆಯನ್ನು ನಡೆಸುವುದು ಪತ್ತೆಯಾಗಿದೆ.
ಹರ್ಷವರ್ಧನ್ ಚಂದ್ರಸ್ವಾಮಿ ಮತ್ತು ಅಂತರರಾಷ್ಟ್ರೀಯ ಶಸ್ತ್ರಾಸ್ತ್ರ ವ್ಯಾಪಾರಿ ಅದ್ನಾನ್ ಖಶೋಗ್ಗಿ ಅವರೊಂದಿಗೆ ಈ ಹಿಂದೆ ಸಂಪರ್ಕ ಹೊಂದಿದ್ದ ಎಂದು ತನಿಖೆಗಳು ಬಹಿರಂಗಪಡಿಸಿವೆ. 2011 ರಲ್ಲಿ, ಆತನ ಬಳಿ ಅಕ್ರಮ ಸ್ಯಾಟಲೈಟ್ ಫೋನ್ ಕೂಡ ಪತ್ತೆಯಾಗಿತ್ತು, ಇದಕ್ಕಾಗಿ ಕವಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Leave a Reply

Your email address will not be published. Required fields are marked *

error: Content is protected !!