ಉದಯವಾಹಿನಿ, ನವದೆಹಲಿ: ಪ್ರಪಂಚದಾದ್ಯಂತ ಮಹಾಮಾರಿಯಾಗಿ ಕಾಡಿದ್ದ ಕೊರೊನಾ ಸೋಂಕು ಭಾರತದಲ್ಲಿ ಗಣನೀಯವಾಗಿ ಕುಸಿತವಾಗಿದ್ದು, ದೇಶವಾಸಿಗಳು ನಿಟ್ಟುಸಿರು ಬಿಡುವಂತಾಗಿದೆ. ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಾಖಲೆ ರೀತಿಯಲ್ಲಿ ಕುಸಿತವಾಗಿದೆ. ಕಳೆದ 24 ಗಂಟೆಯಲ್ಲಿ ಕೇವಲ 36 ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ ಇದು 2020ರ ಮಾರ್ಚ್ ಬಳಿಕ ಪತ್ತೆಯಾಗುತ್ತಿರುವ ಅತ್ಯಂತ ಕಡಿಮೆ ಕೊರೊನಾ ಪ್ರಕರಣಗಳಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ದೇಶದಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳು ಗಣನೀಯವಾಗಿ ತಗ್ಗಿದ್ದು, 1,844 ಸಕ್ರಿಯ ಪ್ರಕರಣಗಳು ಪತ್ತೆಯಾಗಿವೆ. ದೇಶದಲ್ಲಿ ಈವರೆಗೆ 5,31,897 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. 4,44,59,838 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ನಿನ್ನೆ 142 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 220,67,34,611 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 00,387 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.
