ಉದಯವಾಹಿನಿ, ನವದೆಹಲಿ: ಕೊಲೆಯಾದ ರೇಣುಕಾಸ್ವಾಮಿ ನಟ ದರ್ಶನ್‌ ಅಭಿಮಾನಿ ಆಗಿದ್ದ. ಪ್ರಕರಣದ ಎ1 ಆರೋಪಿ ಪವಿತ್ರಾಗೌಡ ದರ್ಶನ್‌ ಜೊತೆಗೆ ವಿವಾಹೇತರ ಸಂಬಂಧ ಹೊಂದಿದ್ದರು. ಲಿವ್‌ ಇನ್‌ ರಿಲೇಷನ್‌ಶಿಪ್‌ನಲ್ಲಿದ್ದರು. ಹೀಗಾಗಿ ರೇಣುಕಾಸ್ವಾಮಿ ಅಸಭ್ಯವಾಗಿ ಮೆಸೇಜ್‌ ಮಾಡಿದ್ದ. ಇದರಿಂದ ಆಕ್ರೋಶಗೊಂಡು ಎ2 ಆರೋಪಿ ದರ್ಶನ್ ತನ್ನ ಸ್ನೇಹಿತರು, ಅಭಿಮಾನಿ ಸಂಘದ ಸದಸ್ಯರನ್ನ ಬಳಸಿಕೊಂಡು ಹತ್ಯೆ ಮಾಡಿದ್ದಾರೆ ಅಂತ ಸರ್ಕಾರದ ಪರ ವಕೀಲ ಸಿದ್ಧಾರ್ಥ್‌ ಲೂಥ್ರಾ ಪ್ರಬಲ ವಾದ ಮಂಡಿಸಿದರು.
ಕೊಲೆ ಪ್ರಕರಣದಲ್ಲಿ ದರ್ಶನ್‌ಗೆ ರಾಜ್ಯ ಹೈಕೋರ್ಟ್‌ ನೀಡಿ‌ದ್ದ ಜಾಮೀನು ಆದೇಶ ಪ್ರಶ್ನಿಸಿ ಬೆಂಗಳೂರು ನಗರ ಪೊಲೀಸರು ಸಲ್ಲಿಸಿದ್ದ ಅರ್ಜಿ ವಿಚಾರಣೆ ಇಂದು ನ್ಯಾ.ಪಾರ್ದಿವಾಲಾ ನೇತೃತ್ವದ ದ್ವಿ-ಸದಸ್ಯ ಪೀಠದಲ್ಲಿ ನಡೆಸಿತು. ಈ ವೇಳೆ ಸುಮಾರು 1 ಗಂಟೆ ಪ್ರಬಲ ವಾದ ಮಂಡಿಸಿದ ಸಿದ್ಧಾರ್ಥ್‌ ಲೂಥ್ರಾ ಅವರು ಹಲವು ವಿಷಯಗಳನ್ನ ಕೋರ್ಟ್‌ ಗಮನಕ್ಕೆ ತಂದರು.

ರೇಣುಕಾಸ್ವಾಮಿ ಎನ್ನುವ ವ್ಯಕ್ತಿಯನ್ನು ಚಿತ್ರದುರ್ಗದಿಂದ ಕಿಡ್ನ್ಯಾಪ್‌ ಮಾಡಿಕೊಂಡು ಬಂದು ಬೆಂಗಳೂರಿನಲ್ಲಿರುವ ಪಟ್ಟಣಗೆರೆ ಶೆಡ್ ನಲ್ಲಿ ಮಾರಾಣಾಂತಿಕ ಹಲ್ಲೆ ಮಾಡಿ ಹತ್ಯೆ ಮಾಡಿದ್ದಾರೆ. ಹಲ್ಲೆಗೂ ಮುನ್ನ ಥಳಿಸಿದ್ದಾರೆ, ಕರೆಂಟ್ ಶಾಕ್ ನೀಡಿದ್ದಾರೆ. ಕಬ್ಬಿಣ ರಾಡ್‌, ಕೋಲಿನಿಂದ ಹೊಡೆದಿದ್ದಾರೆ, ಎದೆಗೆ ಬಲವಾಗಿ ಒದೆಯಲಾಗಿದೆ. ಆರಂಭದಲ್ಲಿ ಹಣಕಾಸಿನ ಕಾರಣಕ್ಕೆ ಹತ್ಯೆ ಮಾಡಿದೆ ಎಂದು ನಾಲ್ವರು ಶರಣಾದರು. ಬಳಿಕ ತನಿಖಾಧಿಕಾರಿ ವಿಚಾರಣೆ ನಡೆಸಿದಾಗ ದೊಡ್ಡ ಜಾಲವೇ ಬಯಲಾಗಿದೆ. ಕೆಳ ಹಂತದ ನ್ಯಾಯಲಯ ಕೆಲವರಿಗೆ, ಹೈಕೋರ್ಟ್ ಈ ಏಳು ಮಂದಿಗೆ ಜಾಮೀನು ನೀಡಿದೆ. ಇದನ್ನು ನಾವು ಪ್ರಶ್ನೆ ಮಾಡಿ ಬಂದಿದ್ದೇವೆ. ಕೊಲೆ ಮಾಡಿರುವುದಕ್ಕೆ ಸಿಸಿಟಿವಿ ದೃಶ್ಯಾವಳಿಗಳು ಸೇರಿ ಪ್ರಬಲ ಸಾಕ್ಷ್ಯಗಳಿವೆ.

Leave a Reply

Your email address will not be published. Required fields are marked *

error: Content is protected !!