ಉದಯವಾಹಿನಿ, ಬೆಂಗಳೂರು: 2023-24ನೇ ಸಾಲಿಗೆ ಶಾಲಾ ಮಕ್ಕಳ ಅಪೌಷ್ಟಿಕತೆ ನಿವಾರಣೆಗಾಗಿ ರಾಜ್ಯದ ಎಲ್ಲಾ ಜಿಲ್ಲೆಗಳ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ 1 ರಿಂದ 8ನೇ ತರಗತಿ ಮಕ್ಕಳಿಗೆ ಪೂರಕ ಪೌಷ್ಟಿಕ ಆಹಾರವಾಗಿ ಬೇಯಿಸಿದ ಮೊಟ್ಟ ವಿತರಿಸಿ. ಮೊಟ್ಟೆ ತಿನ್ನದಂತ ಮಕ್ಕಳಿಗೆ ಬಾಳೆಹಣ್ಣು ಅಥವಾ ಶೇಂಗಾ ಚಿಕ್ಕಿ ವಿತರಿಸುವಂತೆ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ. ಈ ಕುರಿತು ಪಿಎಂ ಪೋಷನ್, ಶಾಲಾ ಶಿಕ್ಷಣ ಇಲಾಖೆಯ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ. ಮಧ್ಯಾಹ್ನದ ಬಿಸಿಯೂಟದೊಂದಿಗೆ ಮಕ್ಕಳಿಗೆ ಅಪೌಷ್ಟಿಕತೆ ಮತ್ತು ಅನಿಮಿಯ ನಿವಾರಣೆಗಾಗಿ ಪೂರಕ ಪೌಷ್ಟಿಕ ಆಹಾರವಾಗಿ ಬೇಯಿಸಿದ ಮೊಟ್ಟ, ಮೊಟ್ಟೆ ತಿನ್ನದವರಿಗೆ ಬಾಳೆ ಹಣ್ಣು ಅಥವಾ ಶೇಂಗಾ ಚಿಕ್ಕಿಯನ್ನು ಒಬ್ಬ ವಿದ್ಯಾರ್ಥಿಗೆ ವಾರದಲ್ಲಿ ಒಂದು ಮೊಟ್ಟೆಯಂತೆ ಮೊದಲ ಹಂತದಲ್ಲಿ ದಿನಾಂಕ 20-06-2023ರಿಂದ ಪ್ರಾರಂಭಿಸಿ ದಿನಾಂಕ 15-07-2023ರವರೆಗೆ ಸರ್ಕಾರದ ಮುಂದಿನ ಆದೇಶದವರೆಗೆ ವಿತರಿಸಲು ಸೂಚಿಸಿದ್ದಾರೆ.

ಇನ್ನೂ ಪ್ರತಿ ವಿದ್ಯಾರ್ಥಿಗೆ ಒಂದು ದಿನಕ್ಕೆ ಒಂದು ಮೊಟ್ಟ, ಬಾಳೆಹಣ್ಣು, ಶೇಂಗಾ ಚಿಕ್ಕಿಯ ಘಟಕ ವೆಟ್ಟ ರೂ.6ರಂತೆ ನಿಗದಿಪಡಿಸಿರುತ್ತದೆ. ಇದರಂತೆ ವೆಚ್ಚ ಭರಿಸಲು ಸೂಚಿಸಿದ್ದಾರೆ. ರಾಜ್ಯದ 31 ಜಿಲ್ಲೆಗಳಲ್ಲಿ 1 ರಿಂದ 8ನೇ ತರಗತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಮಕ್ಕಳಿಗೆ ಶಾಲೆಯ ಮುಖ್ಯ ಶಿಕ್ಷಕರು ಹಿಂದಿನ ಸಾಲಿನ ಮಾರ್ಗಸೂಚಿಯಂತೆ ಎಸ್ ಡಿಎಂಸಿ ನೇತೃತ್ವದಲ್ಲಿ ಅಗತ್ಯ ಕ್ರಮ ಕೈಗೊಂಡು, ಪೂರಕ ಪೌಷ್ಟಿಕ ಆಹಾರವನ್ನು ವಿತರಿಸುವಂತೆ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!