ಉದಯವಾಹಿನಿ, ನವದೆಹಲಿ: ಮುಕ್ತ ಮತ್ತು ನ್ಯಾಯಯುತ ಚುನಾವಣೆ ನಡೆಸಲು ದೇಶಾದ್ಯಂತ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ನಡೆಸಲು ಕೇಂದ್ರ ಚುನಾವಣಾ ಆಯೋಗ ಮಹತ್ವದ ನಿರ್ಧಾರ ಕೈಗೊಂಡಿದೆ.ಮತದಾರರ ಪಟ್ಟಿಗಳಲ್ಲಿರುವ ಹೆಸರನ್ನು ಖಚಿತಪಡಿಸಿಕೊಳ್ಳಲು ತನ್ನ ಸಾಂವಿಧಾನಿಕ ಕರ್ತವ್ಯವನ್ನು ಪೂರೈಸಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಆಯೋಗ ತನ್ನ ನಿರ್ಧಾರವನ್ನು ಸಮರ್ಥಿಸಿಕೊಂಡಿದೆ. ದೇಶದ ಇತರ ಭಾಗಗಳಲ್ಲಿ ನಡೆಯಲಿರುವ ಪರಿಷ್ಕರಣೆಯ ವೇಳಾಪಟ್ಟಿಯನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು ಎಂದು ತನ್ನ ಆದೇಶದಲ್ಲಿ ತಿಳಿಸಿದೆ.ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆಗೆ ಸಂಬಂಧಿಸಿದಂತೆ ವಿಪಕ್ಷಗಳು ಈಗ ಸಂಸತ್ತಿನಲ್ಲಿ ಭಾರೀ ಪ್ರತಿಭಟನೆಗಳನ್ನು ನಡೆಸುತ್ತಿವೆ. 4 ದಿನಗಳಿಂದ ಪ್ರತಿಭಟನೆಗಳು ನಡೆಯುತ್ತಿದ್ದು ಮುಂಗಾರು ಅಧಿವೇಶನವನ್ನು ಅಡ್ಡಿಪಡಿಸುತ್ತಿರುವ ಸಂದರ್ಭದಲ್ಲಿ ಚುನಾವಣಾ ಆಯೋಗ ನಿರ್ಧಾರ ಕೈಗೊಂಡಿದೆ.
