ಉದಯವಾಹಿನಿ, ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿ ಹಲವೆಡೆ ಶನಿವಾರ ಉತ್ತಮ ಮಳೆಯಾಗಿದೆ. ಅದೇ ರೀತಿ ಜುಲೈ 27ರಂದು ಕೂಡ ರಾಜ್ಯದ ವಿವಿಧೆಡೆ ಭಾರಿ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ. ಹೀಗಾಗಿ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ಆರೆಂಜ್ ಅಲರ್ಟ್ ನೀಡಿದ್ದು, ಉತ್ತರ ಒಳನಾಡಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಕರಾವಳಿ ಜಿಲ್ಲೆಗಳಲ್ಲಿ ಭಾನುವಾರ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆ, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಉಳಿದ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗಲಿದೆ.
ಜುಲೈ 28ರಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆ, ಹಾಸನ, ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಇನ್ನುಳಿದಂತೆ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಬೆಂಗಳೂರು, ಮೈಸೂರು, ಕೋಲಾರ, ರಾಮನಗರ ಸೇರಿ ವಿವಿಧ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಜುಲೈ 29ರಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉಳಿದಂತೆ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ ಸೇರಿ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
