ಉದಯವಾಹಿನಿ,ಜೈಪುರ: ಝಲಾವರ್‌ನಲ್ಲಿ ಪ್ರಾಥಮಿಕ ಶಾಲೆಯ ಮೇಲ್ಛಾವಣಿ ಕುಸಿದು 7 ವಿದ್ಯಾರ್ಥಿಗಳು ಮೃತಪಟ್ಟ ಪ್ರಕರಣ ಸಂಬಂಧ ಐವರು ಶಿಕ್ಷಕರನ್ನು ಅಮಾನತು ಮಾಡಲಾಗಿದೆ. ಶುಕ್ರವಾರ ಬೆಳಗ್ಗೆ 8:30ಕ್ಕೆ ಶಾಲೆ ಶುರುವಾದ ವೇಳೆ ದುರಂತ ಸಂಭವಿಸಿದೆ. ಈ ಮೊದಲೇ ಶಿಥಿಲಾವಸ್ಥೆಯಲ್ಲಿದ್ದ ಶಾಲಾ ಕಟ್ಟಡ ಭಾರೀ ಮಳೆಯ ಕಾರಣ ಮೇಲ್ಛಾವಣಿ ಕುಸಿದು ಅವಘಡ ಸಂಭವಿಸಿದೆ ಎಂದು ವರದಿಗಳು ತಿಳಿಸಿವೆ. ಸದ್ಯ ಮೃತದೇಹಗಳನ್ನು ಅವಶೇಷಗಳಿಂದ ಹೊರತೆಗೆದಿದ್ದು, ಇಂದು ಅಂತ್ಯಕ್ರಿಯೆ ನಡೆಯಲಿದೆ. ಗಾಯಾಳು ವಿದ್ಯಾರ್ಥಿಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಶಾಲೆಯ ಮೇಲ್ಛಾವಣಿ ಬೀಳುವ ಪರಿಸ್ಥಿತಿಯಲ್ಲಿದೆ ಎಂದು ಮೊದಲೇ ಎಚ್ಚರಿಸಲಾಗಿತ್ತು. ಆದರೆ ಶಿಕ್ಷಕರು ನಿರ್ಲಕ್ಷ ತೋರಿದ್ದಾರೆ ಎಂದು ಪೋಷಕರು ಆಕ್ರೋಶ ಹೊರಹಾಕಿದ್ದಾರೆ.
ಘಟನೆ ಸಂಬಂಧ ಮನೋಹರ್ಥಾನಾ ಬ್ಲಾಕ್‌ನ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಇಂದು ರಜೆ ಘೋಷಿಸಲಾಗಿದೆ. ಇನ್ನು, ಮುಖ್ಯಮಂತ್ರಿ ಭಜನ್‌ಲಾಲ್ ಶರ್ಮಾ ದುರಂತದ ಬಗ್ಗೆ ತನಿಖೆಗೆ ಆದೇಶಿಸಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!