ಉದಯವಾಹಿನಿ, ಬೆಂಗಳೂರು: ‘ಡೆವಿಲ್’ ಸಿನಿಮಾ (Devil Cinema) ಶೂಟಿಂಗ್ ಸಲುವಾಗಿ ಥೈಲ್ಯಾಂಡ್‌ಗೆ ತೆರಳಿದ್ದ ನಟ ದರ್ಶನ್ (Darshan) ಶುಕ್ರವಾರ ರಾತ್ರಿ ಬೆಂಗಳೂರಿಗೆ ವಾಪಸ್ ಆಗಿದ್ದಾರೆ.ರಾತ್ರಿ 11:45ರ ವಿಮಾನದಲ್ಲಿ ದೇವನಹಳ್ಳಿಯ ಬಳಿಯ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ನಟ ದರ್ಶನ್, ಪತ್ನಿ ವಿಜಯಲಕ್ಷ್ಮಿ ಆಗಮಿಸಿದ್ದಾರೆ. ಕಳೆದ 10 ದಿನಗಳ ಹಿಂದೆ ‘ಡೆವಿಲ್’ ಸಿನಿಮಾ ಶೂಟಿಂಗ್‌ಗೆಂದು ನಟ ದರ್ಶನ್, ಪತ್ನಿ ಹಾಗೂ ಮಗನೊಂದಿಗೆ ಥೈಲ್ಯಾಂಡ್‌ಗೆ ತೆರಳಿದ್ದರು.ಇನ್ನು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ಗೆ ರಾಜ್ಯ ಹೈಕೋರ್ಟ್ ನೀಡಿದ್ದ ಜಾಮೀನು ಆದೇಶ ಪ್ರಶ್ನಿಸಿ ಬೆಂಗಳೂರು ನಗರ ಪೊಲೀಸರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿದ್ದು, ಒಂದು ವಾರದಲ್ಲಿ ಆದೇಶ ಹೊರಡಿಸಲಿದೆ.
