ಉದಯವಾಹಿನಿ, ಕೊಪ್ಪಳ: ಇಲ್ಲಿನ ಗವಿ ಮಠ ವಿಶೇಷ ಕ್ಷಣವೊಂದಕ್ಕೆ ಸಾಕ್ಷಿಯಾಗಿದೆ. ಮುಸ್ಲಿಂ ಮಹಿಳೆಯೊಬ್ಬರು ಗವಿ ಮಠದ ಆವರಣದಲ್ಲಿ ನಾಗದೇವರ ಮುಂದೆ ಧ್ಯಾನಕ್ಕೆ ಕುಳಿತು ಗಮನಸೆಳೆದಿದ್ದಾರೆ.ಕೊಪ್ಪಳಜಿಲ್ಲೆ ಯಲಬುರ್ಗಾ ತಾಲೂಕಿನ ಕುದರಿ ಮೋತಿ ನಿವಾಸಿ ಹಸೀನಾ ಬೇಗಂ ನಾಗ ದೇವರ ಮುಂದೆ ಧ್ಯಾನಕ್ಕೆ ಕುಳಿತ ಮಹಿಳೆ. ಹಸೀನಾ ಬೇಗಂ ಕಳೆದ ಎಂಟು ದಿನಗಳಿಂದ ಗವಿ ಮಠಕ್ಕೆ ಬಂದು ದ್ಯಾನ ಮಾಡುತ್ತಿದ್ದಾರೆ. ಗವಿ ಮಠದಲ್ಲಿ ನಿರಂತರ ಒಂದು ಗಂಟೆಗಳ ಕಾಲ ಧ್ಯಾನದಲ್ಲಿ ತೊಡಗಿದ್ದಾರೆ. 90%ನಷ್ಟು ಹಿಂದೂ ಧರ್ಮದವರು ಗವಿ ಮಠಕ್ಕೆ ಬರುತ್ತಾರೆ. ಆದರೆ ಆವರಣದಲ್ಲಿ ಮುಸ್ಲಿಂ ಮಹಿಳೆಯೊಬ್ಬರು ಧ್ಯಾನ ಮಾಡುತ್ತಿರುವುದು ವಿಶೇಷವಾಗಿದೆ.
ಹಸೀನಾ ಬೇಗಂ ಮಾನಸಿಕ ನೆಮ್ಮದಿಗಾಗಿ ಇಲ್ಲಿ ಧ್ಯಾನ ಮಾಡುತ್ತಿರುವುದಾಗಿ ಹೇಳಿಕೊಂಡಿದ್ದಾರೆ. ಗವಿ ಮಠದ ಶ್ರೀಗಳು ನಿತ್ಯ ಸಂಜೆ ಸಮಯದಲ್ಲಿ ಕುಳಿತುಕೊಳ್ಳುವ ಜಾಗದ ಮುಂದೆಯೆ ಹಸೀನಾ ಧ್ಯಾನಕ್ಕೆ ಕುಳಿತುಕೊಳ್ಳುತ್ತಾರೆ. ಒಟ್ಟು 11 ಧ್ಯಾನ ಮಾಡೋದಾಗಿ ಬೇಡಿಕೊಂಡಿರೋ ಹಸಿನಾ ಬೇಗಂ, ನಾಗದೇವರ ಮುಂದೆ ನಿತ್ಯ ಒಂದು ಗಂಟೆಗಳ ಕಾಲ ಧ್ಯಾನ ಮಾಡುತ್ತಿದ್ದಾರೆ.
