ಉದಯವಾಹಿನಿ, ವಾಷಿಂಗ್ಟನ್: ಯುರೋಪಿಯನ್ ಒಕ್ಕೂಟದೊಂದಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇದುವರೆಗಿನ ಅತಿದೊಡ್ಡ ವ್ಯಾಪಾರ ಒಪ್ಪಂದವನ್ನ ಘೋಷಣೆ ಮಾಡಿದ್ದಾರೆ. ಈ ಒಪ್ಪಂದದ ಅಡಿಯಲ್ಲಿ ಒಕ್ಕೂಟದಿಂದ ಬರುವ ಆಮದುಗಳ ಮೇಲೆ 15% ಸುಂಕ ವಿಧಿಸಲಾಗುತ್ತದೆ.
ಅಮೆರಿಕದ ಅಧ್ಯಕ್ಷರಾಗಿ 2ನೇ ಬಾರಿಗೆ ಅಧಿಕಾರ ವಹಿಸಿಕೊಂಡ ಟ್ರಂಪ್ ತನ್ನ ದೇಶದ ವ್ಯಾಪಾರ ಸುಧಾರಿಸುವ ದೃಷ್ಟಿಯಲ್ಲಿ ಹಲವು ದೇಶಗಳ ಮೇಲೆ ಸುಂಕ ಸಮರ ಸಾರಿದ್ದಾರೆ. ಕೆಲ ದಿನಗಳ ಹಿಂದೆ ಟ್ರಂಪ್ 14 ದೇಶಗಳ ಮೇಲೆ ಸುಂಕ ವಿಧಿಸಿದ್ದರು. ಆಗಸ್ಟ್ 1 ರಿಂದಲೇ ಹೊಸ ಸುಂಕ ಜಾರಿಗೆ ಬರಲಿದೆ ಎಂದು ಘೋಷಿಸಿದ್ದರು. ಆದ್ರೆ ಈ ಪಟ್ಟಿಯಲ್ಲಿ ಭಾರತವನ್ನ ಹೊರಗಿಟ್ಟಿದ್ದರು. ಮುಂಬರುವ ಆಗಸ್ಟ್ 1ರಿಂದ ಯುರೋಪಿಯನ್ ಒಕ್ಕೂಟದ ರಫ್ತಿನ ಮೇಲೆ 30% ಸುಂಕ ವಿಧಿಸುವುದಾಗಿ ಟ್ರಂಪ್ ಘೋಷಿದ್ದರು. ಈ ನಡುವೆ ಮಹತ್ವದ ಒಪ್ಪಂದ ಮಾಡಿಕೊಂಡಿದ್ದು, 30% ಸುಂಕದಿಂದ ಬಚಾವ್ ಆಗಿದೆ. ಸ್ಕಾಟ್ಲೆಂಡ್‌ನಲ್ಲಿರುವ ತಮ್ಮ ಗಾಲ್ಫ್ ರೆಸಾರ್ಟ್‌ನಲ್ಲಿ ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಯುರೋಪಿಯನ್ ಕಮಿಷನ್ ಅಧ್ಯಕ್ಷೆ ಉರ್ಸುಲಾ ವಾನ್ ಡೆರ್ ಲೇಯೆನ್ ನಡುವಿನ ಮಹತ್ವದ ಸಭೆಯಲ್ಲಿ ಇದುವರೆಗಿನ ಅತಿದೊಡ್ಡ ವ್ಯಾಪಾರ ಒಪ್ಪಂದ ಮಾಡಿಕೊಳ್ಳಲಾಗಿದೆ. ಇದರನ್ವಯ ಯುರೋಪಿನ್‌ನಿಂದ ರಫ್ತಾಗುವ ಆಟೋಮೊಬೈಲ್, ಔಷಧಗಳು ಮತ್ತು ಅರೆವಾಹಕ ಸೇರಿದಂತೆ ಇತರೇ ಸರಕುಗಳ ಮೇಲೆ 15% ಸುಂಕವನ್ನಷ್ಟೇ ವಿಧಿಸಲಾಗುತ್ತದೆ.
