ಉದಯವಾಹಿನಿ,ಚಿಕ್ಕಮಗಳೂರು:  ನಗರದ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ನಡೆದ ಯೋಗ ದಿನಾಚರಣೆಯ ಬಳಿಕ ಮಾತನಾಡಿದ ಅವರು, ಮೋದಿ ಕೊಡುತ್ತಿರುವ ಅಕ್ಕಿ ಸೇರಿ ನೀವು 10 ಕೆಜಿ ಅಕ್ಕಿ ಕೊಡೋದಲ್ಲ, ಕೇಂದ್ರ ಸರ್ಕಾರದ 5 ಕೆಜಿ ಅಕ್ಕಿ ಜೊತೆ ನೀವು ಘೋಷಿಸಿರುವಂತೆ 10 ಕೆಜಿ ಅಕ್ಕಿ ಕೊಡಿ. ಅಂದರೆ ಒಬ್ಬರಿಗೆ ತಲಾ 15 ಕೆಜಿ ಅಕ್ಕಿ ಕೊಡಬೇಕು. ಅಕ್ಕಿ ಕೊಡಲು ಆಗದಿದ್ದರೆ ಅಧಿಕಾರ ಬಿಟ್ಟು ತೊಲಗಿ ಎಂದು ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮರ್ಯಾದೆ ಇಲ್ಲದ ಬೇಜವಾಬ್ದಾರಿ ಮುಖ್ಯಮಂತ್ರಿ. ಚುನಾವಣೆಗೂ ಮುನ್ನ ಗ್ಯಾರಂಟಿಗಳನ್ನು ಘೋಷಿಸುವಾಗ ನಿಮ್ಮ ತಲೆಯಲ್ಲಿ ಏನಿತ್ತು? ಮೆದುಳು ಇರಲಿಲ್ಲವಾ, ಸಗಣಿ ತುಂಬಿತ್ತಾ ಎಂದು ಕಿಡಿ ಕಾರಿದರು. ಒಂದೇ ತಿಂಗಳಿಗೆ ರಾಜ್ಯದಲ್ಲಿ ಅರಾಜಕತೆ ತುಂಬಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ ಅವರು, ಕಾಂಗ್ರೆಸ್ಸಿಗರಿಗೆ ಮಾನ-ಮರ್ಯಾದೆ ಇಲ್ಲ. ವೋಟು ಹಾಕಿಸಿಕೊಂಡು ಜನರಿಗೆ ಮೋಸ ಮಾಡಿದ್ದೀರಾ. ಸಿದ್ದರಾಮಯ್ಯನವರೇ ನಿಮ್ಮ ಬೇಜವಾಬ್ದಾರಿ ಹೇಳಿಕೆಗಳನ್ನು ವಾಪಸ್ಸು ತೆಗೆದುಕೊಳ್ಳಿ. ರಾಜ್ಯ ಸರ್ಕಾರ ಒಂದು ಬೇಜವಾಬ್ದಾರಿಯ ಸರ್ಕಾರ. ಚುನಾವಣೆಯನ್ನು ಗೆಲ್ಲುವುದಕ್ಕೆ ಇಲ್ಲಸಲ್ಲದ ಭರವಸೆ, ಆಸೆ ತೋರಿಸಿದ್ದರು ಎಂದು ವಾಗ್ದಾಳಿ ನಡೆಸಿದರು.

Leave a Reply

Your email address will not be published. Required fields are marked *

error: Content is protected !!