ಉದಯವಾಹಿನಿ, ನನವದೆಹಲಿ: ಆಪರೇಷನ್‌ ಸಿಂಧೂರ ಕಾರ್ಯಾಚರಣೆಯಲ್ಲಿ ಸೇನೆಯು ದೇಶಕ್ಕಾಗಿ ಹೋರಾಡಿತು. ಆದ್ರೆ ಅದರ ಕ್ರೆಡಿಟ್‌ ಅನ್ನು ಪ್ರಧಾನಿ ಮೋದಿ ಬಯಸುತ್ತಿದ್ದಾರೆ. ನಿಮಗೆ ದೊಡ್ಡ ನಮಸ್ಕಾರ ಅಂತ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ತಿವಿದರು.
ಪಹಲ್ಗಾಮ್‌ ಭಯೋತ್ಪಾದಕ ದಾಳಿ ಮತ್ತು ಆಪರೇಷನ್‌ ಸಿಂಧೂರ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನೀವು 11 ವರ್ಷದಿಂದ ಅಧಿಕಾರದಲ್ಲಿದ್ದೀರಿ. ನಿನ್ನೆ ಗೌರವ್‌ ಗೊಗೊಯ್‌ ಅವರು ಜವಾಬ್ದಾರಿ ಬಗ್ಗೆ ಮಾತನಾಡುತ್ತಿದ್ದಾಗ ರಾಜನಾಥ್‌ ಸಿಂಗ್‌ ತಲೆಯಾಡಿಸುತ್ತಿದ್ದರು, ಗೃಹ ಸಚಿವರು ನಗುತ್ತಿದ್ದರು. ಮುಂಬೈ ದಾಳಿ ನಡೆದಾಗ ಮನಮೋಹನ್‌ ಸಿಂಗ್‌ ಸರ್ಕಾರ ಏನೂ ಮಾಡಲಿಲ್ಲ ಅಂತ ಹೇಳಿದ್ರು. ಆದ್ರೆ ಅವರಿಗೆ ನೆನಪಿಲ್ಲ ಅನ್ನಿಸುತ್ತೆ, ದಾಳಿ ನಡೆಯುತ್ತಿದ್ದಾಗಲೇ ಮೂವರು ಉಗ್ರರು ಹತರಾದರು, ಬದುಕುಳಿದ ಒಬ್ಬನನ್ನು ಹಿಡಿದು ಗಲ್ಲಿಗೇರಿಸಲಾಯಿತು. ಆ ಸಂದರ್ಭದಲ್ಲಿ ಮಹಾರಾಷ್ಟ್ರದ ಸಿಎಂ, ದೇಶದ ಗೃಹ ಸಚಿವರಾಗಿದ್ದವರು ರಾಜೀನಾಮೆ ಕೊಟ್ಟರು. ಆದ್ರೆ ಉರಿ-ಪುಲ್ವಾಮಾ ದಾಳಿ ರಾಜನಾಥ್‌ ಸಿಂಗ್‌ ಗೃಹ ಸಚಿವರಾಗಿದ್ದರು, ಈಗ ರಕ್ಷಣಾ ಸಚಿವರಾಗಿದ್ದಾರೆ. ಅಮಿತ್‌ ಶಾ ಅವರ ಅಧಿಕಾರವಧಿಯಲ್ಲಿ ಮಣಿಪುರ ಹೊತ್ತಿ ಉರಿಯುತ್ತಿದೆ. ದೆಹಲಿಯಲ್ಲಿ ಗಲಭೆಗಳು ನಡೆಯುತ್ತಿವೆ. ಅದೇ ಹಾದಿಯಾಗಿ ಪಹಲ್ಗಾಮ್‌ ದಾಳಿಯೂ ನಡೆಯಿತು. ರಾಜೀನಾಮೆ ಕೊಡದೇ ಈಗಲೂ ಗೃಹಸಚಿವರಾಗಿಯೇ ಇದ್ದಾರೆ ಎಂದು ಕುಟುಕಿದರು.

Leave a Reply

Your email address will not be published. Required fields are marked *

error: Content is protected !!