ಉದಯವಾಹಿನಿ, ಸಾಮಾನ್ಯವಾಗಿ ಹುಡುಗಿಯರನ್ನು ಚುಡಾಯಿಸಿಕೊಂಡು ಓಡಾಡುವ ಹುಡುಗರನ್ನು ʻಫ್ಲರ್ಟ್ʼ ಎನ್ನುತ್ತಾರೆ. ಇದೀಗ ಇದೇ ಹೆಸರಿನಲ್ಲಿ ಚಲನಚಿತ್ರವೊಂದು ನಿರ್ಮಾಣವಾಗಿದೆ. ಕಿಚ್ಚ ಸುದೀಪ್ ಗರಡಿಯ ಹುಡುಗ, ಸಿಸಿಎಲ್ ಸಹಪಾಠಿಯೂ ಆದ ಚಂದನ್ ಕುಮಾರ್ ನಾಯಕನಾಗಿ ಅಭಿನಯಿಸಿರುವ ಈ ಚಿತ್ರದ ಹಾಡೊಂದಕ್ಕೆ ಸುದೀಪ್ ಅವರೇ ದನಿಯಾಗಿದ್ದಾರೆ. ಈ ಫ್ರೆಂಡ್ ಶಿಪ್ ಆಂಥೆಮ್‌ನ ಬಿಡುಗಡೆ ಕಾರ್ಯಕ್ರಮ ಸೋಮವಾರ ಸಂಜೆ ನೆರವೇರಿತು. ಫ್ಲರ್ಟ್ʼ ಚಿತ್ರದಲ್ಲಿ ನಟಿಸುವ ಜತೆಗೆ ಚಿತ್ರದ ನಿರ್ದೇಶನದ ಜವಾಬ್ದಾರಿಯನ್ನೂ ಸಹ ಚಂದನ್ ಕುಮಾರ್ ಅವರೇ ಹೊತ್ತಿದ್ದಾರೆ. ಅಲ್ಲದೆ ಎವರೆಸ್ಟ್ ಪಿಕ್ಚರ್ಸ್ ಬ್ಯಾನರ್ ಅಡಿ ಚಂದನ್ ಅವರ ಪತ್ನಿ ಕವಿತಾಗೌಡ ಈ ಚಿತ್ರವನ್ನು ನಿರ್ಮಿಸಿದ್ದಾರೆ. ʻಎ ಪ್ಯೂರ್ ಡವ್ ಸ್ಟೋರಿʼ ಎಂಬ ಅಡಿಬರಹ ಫ್ಲರ್ಟ್ ಚಿತ್ರಕ್ಕಿದ್ದು, ಇದಕ್ಕೆ ವಿವರಣೆಯನ್ನೂ ಚಂದನ್ ನೀಡಿದ್ದಾರೆ. ವಿಶೇಷವಾಗಿ ಸುದೀಪ್ ಅವರ ಹಾಡಿಗೆ ನಕುಲ್ ಅಭಯಂಕರ್ ಸಂಗೀತ ಸಂಯೋಜನೆ ಮಾಡಿದ್ದಾರೆ. ಹಾಡಿನ ಬಿಡುಗಡೆ ಸಂದರ್ಭದಲ್ಲಿ ಸುದೀಪ್ ಅವರು ಚಂದನ್ ಗೆ ವಿಡಿಯೋ ಮೂಲಕ ಶುಭ ಹಾರೈಸಿದರು.

Leave a Reply

Your email address will not be published. Required fields are marked *

error: Content is protected !!