ಉದಯವಾಹಿನಿ, ದರ್ಶನ್ ಅಭಿಮಾನಿಗಳ ವಿರುದ್ಧ ಕಾನೂನು ಸಮರಕ್ಕಿಳಿದಿರುವ ಸ್ಯಾಂಡಲ್‌ವುಡ್ ಕ್ವೀನ್ ರಮ್ಯಾಗೆ ದೊಡ್ಮನೆ ಕುಟುಂಬ ಸಾಥ್ ನೀಡಿದೆ.ನಟ ಶಿವರಾಜ್‌ಕುಮಾರ್ ಹಾಗೂ ಪತ್ನಿ ಗೀತಾ ಶಿವರಾಜ್‌ಕುಮಾರ್ ಅವರು ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಈ ಕುರಿತು ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದಾರೆ. ರಮ್ಯಾ ಅವರ ವಿರುದ್ಧ ಬಳಸಿರುವ ಪದಗಳು ಖಂಡನೀಯ. ಯಾವ ಮಹಿಳೆಯ ವಿರುದ್ಧವೂ ಆ ರೀತಿ ಮಾತನಾಡುವುದು ಸರಿಯಲ್ಲ. ಅದನ್ನು ನಾವು ಸಹಿಸಬಾರದು. ಮಹಿಳೆಯರನ್ನು ತಾಯಿಯಾಗಿ, ಅಕ್ಕನಾಗಿ, ಮಗಳಾಗಿ, ಮಡದಿಯಾಗಿ ಮತ್ತು ಮೊಟ್ಟಮೊದಲು ಒಬ್ಬ ವ್ಯಕ್ತಿಯಾಗಿ ಗೌರವಿಸುವುದು ತುಂಬಾ ಮುಖ್ಯ. ಇದು ಸರಿಯಲ್ಲ ಎಂದು ಪರೋಕ್ಷವಾಗಿ ಡಿ-ಬಾಸ್ ಅಭಿಮಾನಿಗಳ ವಿರುದ್ಧ ಸಿಡಿದೆದ್ದಿದ್ದಾರೆ.ಸೋಶಿಯಲ್ ಮೀಡಿಯಾ ತುಂಬಾ ಬಲಿಷ್ಠವಾದ ಅಸ್ತ್ರ. ಅದನ್ನು ತಮ್ಮ ಏಳಿಗೆಗಾಗಿ ಬಳಸಬೇಕೇ ಹೊರತು, ಅವಾಚ್ಯ ಶಬ್ದಗಳಿಂದ ನಿಂದಿಸಿ, ದ್ವೇಷ-ಅಸೂಯೆಯನ್ನು ಬಿತ್ತಲು ಬಳಸಬಾರದು. ರಮ್ಯಾ ನಿಮ್ಮ ನಿಲುವು ಸರಿಯಿದೆ, ನಿಮ್ಮ ಜೊತೆಗೆ ನಾವು ಸದಾ ನಿಲ್ಲುತ್ತೇವೆ ಎಂದು ಬೆಂಬಲ ಸೂಚಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!